Home Karnataka Chikkaballapura Chikkaballapur ಜಿಲ್ಲಾದ್ಯಂತ ತಿಂಗಳೊಳಗೆ Grama One ಕೇಂದ್ರಗಳ ಆರಂಭ

Chikkaballapur ಜಿಲ್ಲಾದ್ಯಂತ ತಿಂಗಳೊಳಗೆ Grama One ಕೇಂದ್ರಗಳ ಆರಂಭ

Chikkaballapur District Grama One Centres

Chikkaballapur : ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ Grama One ಕೇಂದ್ರದ ಪ್ರಾಂಚೈಸಿಗಳ ಆಯ್ಕೆ ಮಾಡುವ ಜಿಲ್ಲಾಮಟ್ಟದ ಕಾರ್ಯಪಡೆ ಸಭೆಗೆ ಜಿಲ್ಲಾಧಿಕಾರಿ ಆರ್. ಲತಾ (Deputy Commissioner R. Latha) ಅಧ್ಯಕ್ಷತೆ ವಹಿಸಿಕೊಂಡಿದ್ದರು.

ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಆರ್. ಲತಾ ”ಸರ್ಕಾರದ ಆದೇಶದಂತೆ ಜಿಲ್ಲೆಯಲ್ಲಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ 229 ಗ್ರಾಮ ಒನ್ ಕೇಂದ್ರಗಳನ್ನು ತೆರೆಯಲು ಕ್ರಮವಹಿಸಲಾಗಿದ್ದು, ಈ ತಿಂಗಳ ಅಂತ್ಯದೊಳಗೆ 201 ಕೇಂದ್ರಗಳು ಆರಂಭವಾಗಿ ಸಾರ್ವಜನಿಕ ಸೇವೆಗೆ ಮುಕ್ತವಾಗಲಿವೆ. ಜಿಲ್ಲೆಗೆ ಸಂಬಂಧಿಸಿದಂತೆ ಎಲ್ಲಾ 157 ಗ್ರಾಮ ಪಂಚಾಯಿತಿಗಳಲ್ಲಿ ಜನಸಂಖ್ಯೆಗೆ ಅನುಗುಣವಾಗಿ ಪ್ರತಿ ಪಂಚಾಯಿತಿಗೆ ಒಂದು ಅಥವಾ ಎರಡರಂತೆ ಗ್ರಾಮ ಒನ್ ಕೇಂದ್ರವನ್ನು ಪ್ರಾಂಚೈಸಿಗಳ ಮೂಲಕ ಅನುಷ್ಠಾನಗೊಳಿಸಲು Online ಮುಖಾಂತರ ಅರ್ಜಿ ಆಹ್ವಾನಿಸಲಾಗಿದ್ದು 393 ಅರ್ಜಿಗಳು ಬಂದಿದ್ದು 201 ಕೇಂದ್ರಗಳಿಗೆ ಅರ್ಹ ಪ್ರಾಂಚೈಸಿಗಳನ್ನು ಆಯ್ಕೆ ಮಾಡಲಾಗಿದೆ.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಶಿವಕುಮಾರ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

For Daily Updates WhatsApp ‘HI’ to 7406303366

You cannot copy content of this page

Exit mobile version