Chikkaballapur : ಭೂಮಿ, ವಸತಿ ಸಮಸ್ಯೆಗಳ ಪರಿಹಾರ, ಬಗರ್‌ಹುಕುಂ ಯೋಜನೆಯಡಿ ಸಾಗುವಳಿ ಚೀಟಿ ನೀಡುವುದು ಸೇರಿದಂತೆ ಜಿಲ್ಲೆಯಲ್ಲಿನ ದಲಿತರ ಸಮಸ್ಯೆಗಳ ಪರಿಹಾರಕ್ಕೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ (Dalita Sangharsha Samiti) (DSS) ವತಿಯಿಂದ ಸೋಮವಾರ ಚಿಕ್ಕಬಳ್ಳಾಪುರ ಜಿಲ್ಲೆಯ ಮಂಚೇನಹಳ್ಳಿ ಹೊರತುಪಡಿಸಿ ತಾಲ್ಲೂಕು ಕೇಂದ್ರಗಳಲ್ಲಿ ಅನಿರ್ದಿಷ್ಟಾವಧಿ ಧರಣಿ ಹಮ್ಮಿಕೊಳ್ಳಲಾಗಿದೆ. ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಚಿಕ್ಕಬಳ್ಳಾಪುರ ಉಪವಿಭಾಗಾಧಿಕಾರಿ ಕಚೇರಿ ಎದುರು ಧರಣಿ (Protest) ನಡೆಸಿದರು.
ಶಿಡ್ಲಘಟ್ಟ:
ಶಿಡ್ಲಘಟ್ಟದ ತಾಲ್ಲೂಕು ಕಚೇರಿ ಮುಂದೆ ದಲಿತರ ಸಮಸ್ಯೆಗಳ ಪರಿಹಾರಕ್ಕೆ ಒತ್ತಾಯಿಸಿ ದಸಂಸ ವತಿಯಿಂದ ಅನಿರ್ದಿಷ್ಟ ಧರಣಿ ನಡೆಸಲಾಯಿತು.
ಗುಡಿಬಂಡೆ :
ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಗುಡಿಬಂಡೆ ಪಟ್ಟಣದ ತಾಲ್ಲೂಕು ಕಚೇರಿ ಎದುರು ಪ್ರತಿಭಟಿಸಿದರು.
ಚಿಂತಾಮಣಿ :
ಚಿಂತಾಮಣಿ ತಾಲ್ಲೂಕು ಕಚೇರಿ ಎದುರು ದಲಿತ ಸಂಘರ್ಷ ಸಮಿತಿ ಮುಖಂಡರು ಹಾಗೂ ಕಾರ್ಯಕರ್ತರು ಹಲವಾರು ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಧರಣಿ ನಡೆಸಿದರು.
ಗೌರಿಬಿದನೂರು:
ಗೌರಿಬಿದನೂರು ಆಡಳಿತ ಸೌಧದ ಆವರಣದಲ್ಲಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿಯಿಂದ ಸೋಮವಾರ ಅನಿರ್ದಿಷ್ಟಾವಧಿ ಧರಣಿ ನಡೆಯಿತು.
ಚೇಳೂರು:
ಚೇಳೂರು ತಾಲ್ಲೂಕು ಕಚೇರಿಯ ಆವರಣದಲ್ಲಿ ದಲಿತ ಸಂಘರ್ಷ ಸಮಿತಿಯಿಂದ ಪ್ರತಿಭಟನೆ ನಡೆಸಲಾಯಿತು.
For Daily Updates WhatsApp ‘HI’ to 7406303366
The post ದಲಿತರ ಸಮಸ್ಯೆಗಳ ಪರಿಹಾರಕ್ಕೆ ಒತ್ತಾಯಿಸಿ ಜೆಲ್ಲೆಯಾದ್ಯಾಂತ DSS ಧರಣಿ appeared first on Chikkaballapur | Chikballapur | Chikkaballapura Latest Breaking New Stories | ಚಿಕ್ಕಬಳ್ಳಾಪುರ ಸುದ್ದಿ.