Home Karnataka Chikkaballapura ವಾರ್ತಾ ಇಲಾಖೆಯಿಂದ ಪತ್ರಿಕೋದ್ಯಮ ಪದವೀಧರರಿಗೆ 12 ತಿಂಗಳ ಅಪ್ರೆಂಟಿಸ್ ತರಬೇತಿ

ವಾರ್ತಾ ಇಲಾಖೆಯಿಂದ ಪತ್ರಿಕೋದ್ಯಮ ಪದವೀಧರರಿಗೆ 12 ತಿಂಗಳ ಅಪ್ರೆಂಟಿಸ್ ತರಬೇತಿ

Chikkaballapur : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು 2025-26ನೇ ಸಾಲಿಗೆ ಎಸ್.ಸಿ.ಎಸ್.ಪಿ (SCSP) ಮತ್ತು ಟಿ.ಎಸ್.ಪಿ (TSP) ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ (SC/ST) ತಲಾ ಒಬ್ಬ ಅಭ್ಯರ್ಥಿಗಳಿಗೆ 12 ತಿಂಗಳ ಅವಧಿಯ ಅಪ್ರೆಂಟಿಸ್ ತರಬೇತಿಗೆ ಅರ್ಜಿಗಳನ್ನು ಆಹ್ವಾನಿಸಿದೆ.

ಚಿಕ್ಕಬಳ್ಳಾಪುರ ಜಿಲ್ಲಾ ಕಚೇರಿಯಲ್ಲಿ ನಡೆಯಲಿರುವ ಈ ತರಬೇತಿ ಕಾರ್ಯಕ್ರಮಕ್ಕೆ ಪತ್ರಿಕೋದ್ಯಮದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿದಾರರು ಕಂಪ್ಯೂಟರ್ ಜ್ಞಾನ ಮತ್ತು ಕನ್ನಡ ಭಾಷೆ ಬಳಸುವ ಪ್ರಬುದ್ಧತೆಯನ್ನು ಹೊಂದಿರಬೇಕು.

ಮಾಹಿತಿಗಾಗಿ ಸಂಪರ್ಕ: ಹಿರಿಯ ಸಹಾಯಕ ನಿರ್ದೇಶಕ (9480841224) ಅಥವಾ ವಾರ್ತಾ ಸಹಾಯಕ (9353592472) ಅವರನ್ನು ಸಂಪರ್ಕಿಸಬಹುದು.

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಮೆರಿಟ್ ಮತ್ತು ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ವಯೋಮಿತಿ: ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳಿಗೆ 35 ವರ್ಷದೊಳಗೆ ಇರಬೇಕು.

ಗೌರವಧನ: ತರಬೇತಿಯ ವೇಳೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹ 15 ಸಾವಿರ ಗೌರವಧನ ನೀಡಲಾಗುತ್ತದೆ.

ಒಮ್ಮೆ ಈ ಯೋಜನೆಯಡಿ ಫಲಾನುಭವಿಯಾದವರನ್ನು ಮತ್ತೊಂದು ಅವಧಿಗೆ ಆಯ್ಕೆ ಮಾಡಲು ಅವಕಾಶವಿಲ್ಲ. ಅರ್ಹ ಅಭ್ಯರ್ಥಿಗಳು ಜಿಲ್ಲೆಯಲ್ಲಿ ದೊರೆಯದಿದ್ದರೆ, ನೆರೆಯ ಜಿಲ್ಲೆಗಳಿಂದಲೂ ಆಯ್ಕೆ ಮಾಡಿಕೊಳ್ಳಲು ಅವಕಾಶವಿದೆ.

ಅರ್ಜಿ ಸಲ್ಲಿಕೆ: ಆಸಕ್ತರು ಡಿಸೆಂಬರ್ 23 ರೊಳಗೆ ಅರ್ಜಿಯನ್ನು ಹಿರಿಯ ಸಹಾಯಕ ನಿರ್ದೇಶಕರ ಕಚೇರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾಡಳಿತ ಭವನ, ಚಿಕ್ಕಬಳ್ಳಾಪುರ ಇಲ್ಲಿ ಪಡೆದು, ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಬಹುದು.

For Daily Updates WhatsApp ‘HI’ to 7406303366

The post ವಾರ್ತಾ ಇಲಾಖೆಯಿಂದ ಪತ್ರಿಕೋದ್ಯಮ ಪದವೀಧರರಿಗೆ 12 ತಿಂಗಳ ಅಪ್ರೆಂಟಿಸ್ ತರಬೇತಿ appeared first on Chikkaballapur | Chikballapur | Chikkaballapura Latest Breaking New Stories | ಚಿಕ್ಕಬಳ್ಳಾಪುರ ಸುದ್ದಿ.

NO COMMENTS

LEAVE A REPLY

Please enter your comment!
Please enter your name here

You cannot copy content of this page

Exit mobile version