
Chikkaballapur : ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಡಾ.ಕೆ.ಸುಧಾಕರ್ (Dr K Sudhakar) ಅವರನ್ನು ಬೆಂಬಲಿಸಬೇಕೇ, ಬೇಡವೇ ಎನ್ನುವ ಬಗ್ಗೆ ತೀರ್ಮಾನಕೈಗೊಳ್ಳಲು ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ JDS ಮುಖಂಡರು ಮತ್ತು ಕಾರ್ಯಕರ್ತರು (Karyakarta) ಮಾಜಿ ಶಾಸಕ ಕೆ.ಪಿ.ಬಚ್ಚೇಗೌಡ ಅವರ ನಿವಾಸದಲ್ಲಿ ಶುಕ್ರವಾರ ಸಭೆ (Meeting) ನಡೆಸಿದರು.
ಸಭೆಯಲ್ಲಿ ಕಾರ್ಯಕರ್ತರು ಮೈತ್ರಿ ಸಾಧಕ ಬಾಧಕಗಳ ಬಗ್ಗೆ ಸುದೀರ್ಘವಾಗಿ ಚರ್ಚೆ ನಡೆಸಿ ಮುಖಂಡರೂ ಸಹ ತಮ್ಮ ಅಭಿಪ್ರಾಯಗಳನ್ನು ತಿಳಿಸಿದರು. ಬಿಜೆಪಿ–ಜೆಡಿಎಸ್ ಮೈತ್ರಿ ಅಭ್ಯರ್ಥಿಯನ್ನು ಬೆಂಬಲಿಸಬೇಕೇ, ತಟಸ್ಥವಾಗಿ ಇರಬೇಕೇ ಅಥವಾ ಕಾಂಗ್ರೆಸ್ ಸೇರಬೇಕೆ ಎನ್ನುವ ವಿಚಾರಗಳು ಸಭೆಯಲ್ಲಿ ಚರ್ಚೆಯಾಗಿವೆ ಎಂದು ತಿಳಿಸಲಾಗಿದೆ.
ಸಭೆಯಲ್ಲಿ ಮಾಜಿ ಶಾಸಕ ಕೆ.ಪಿ.ಬಚ್ಚೇಗೌಡ, ಜಿಲ್ಲಾ ಜೆಡಿಎಸ್ ಅಧ್ಯಕ್ಷ ಮುನೇಗೌಡ, ಜೆಡಿಎಸ್ ಮುಖಂಡರು, ಕಾರ್ಯಕರ್ತರು ಭಾಗವಹಿಸಿದರು.
For Daily Updates WhatsApp ‘HI’ to 7406303366
The post ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಕಾರ್ಯಕರ್ತರ ಸಭೆ appeared first on Chikkaballapur | Chikballapur | Chikkaballapura | ಚಿಕ್ಕಬಳ್ಳಾಪುರ.