
Chikkaballapur : ಚಿಕ್ಕಬಳ್ಳಾಪುರ ಲೋಕಸಭಾ ಚುನಾವಣೆಗೆ (Lokasabha Election) ನಾಮಪತ್ರ ಸಲ್ಲಿಕೆ ಕಾರ್ಯ (Nomination Filling) ಆರಂಭವಾಗಿದ್ದು ನಾಮಪತ್ರ ಸಲ್ಲಿಕೆಯ ಮೊದಲ ದಿನವಾದ ಗುರುವಾರ ಒಂದು ನಾಮಪತ್ರ ಸಲ್ಲಿಕೆಯಾಗಿದೆ. ಪಕ್ಷೇತರ ಅಭ್ಯರ್ಥಿ ಎ.ಎಸ್.ಭಾಸ್ಕರ್ ಎಂಬುವವರು ನಾಮಪತ್ರ ಸಲ್ಲಿಸಿದರು.
ಚಿಕ್ಕಬಳ್ಳಾಪುರ ನಗರದ ಜಿಲ್ಲಾಡಳಿತ ಭವನದ ಎಫ್.ಎ-4 ರಲ್ಲಿರುವ ಚುನಾವಣಾಧಿಕಾರಿ ಕಚೇರಿಯಲ್ಲಿ ಬೆಳಿಗ್ಗೆ 11 ರಿಂದ ಮಧ್ಯಾಹ್ನ 3ರವರೆಗೆ ಸರ್ಕಾರಿ ರಜಾ ದಿನ ಹೊರತುಪಡಿಸಿ ನಾಮಪತ್ರ ಸ್ವೀಕರಿಸಲಾಗುತ್ತದೆ. ಏ.4 ರವರೆಗೆ ನಾಮಪತ್ರ ಸಲ್ಲಿಸಬಹುದು. ಏಪ್ರಿಲ್ 5ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಉಮೇದುವಾರಿಕೆ ಹಿಂಪಡೆಯಲು ಏಪ್ರಿಲ್ 8ರ ಮಧ್ಯಾಹ್ನ 3ರವರೆಗೆ ಅವಕಾಶವಿದೆ.
ನಾಮಪತ್ರ ಸಲ್ಲಿಕೆ ಮತ್ತು ದಾಖಲೆಗಳ ಬಗ್ಗೆ ಹೆಚ್ಚಿನ ಮಾಹಿತಿ ಅವಶ್ಯಕವಿದ್ದಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಹರೀಶ್.ಎಚ್.ಎ, ಶಿರಸ್ತೇದಾರ್ 08156-277004 ಸಂಪರ್ಕಿಸಬಹುದು ಎಂದು ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ ತಿಳಿಸಿದ್ದಾರೆ.
For Daily Updates WhatsApp ‘HI’ to 7406303366
The post ಲೋಕಸಭಾ ಚುನಾವಣೆ : ಮೊದಲ ದಿನ ಒಂದು ನಾಮಪತ್ರ ಸಲ್ಲಿಕೆ appeared first on Chikkaballapur | Chikballapur | Chikkaballapura | ಚಿಕ್ಕಬಳ್ಳಾಪುರ.