Friday, October 11, 2024
HomeKarnatakaChikkaballapuraವೈದ್ಯಕೀಯ ಶಿಕ್ಷಣ ಕಾಲೇಜು ಕಾಮಗಾರಿ ಪ್ರಗತಿ ಪರಿಶೀಲನೆ

ವೈದ್ಯಕೀಯ ಶಿಕ್ಷಣ ಕಾಲೇಜು ಕಾಮಗಾರಿ ಪ್ರಗತಿ ಪರಿಶೀಲನೆ

Chikkaballapur : ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ (Minister of Health and Family Welfare and Medical Education of Karnataka, Dr. K. Sudhakar) ಶನಿವಾರ ಚಿಕ್ಕಬಳ್ಳಾಪುರ ತಾಲ್ಲೂಕಿನ ಆರೂರು ಬಳಿ ನೂತನವಾಗಿ ನಿರ್ಮಾಣ ಆಗುತ್ತಿರುವ ವೈದ್ಯಕೀಯ ಶಿಕ್ಷಣ ಕಾಲೇಜು (Medical College) ಕಟ್ಟಡ ಕಾಮಗಾರಿಯ (Construction) ಪ್ರಗತಿ ಪರಿಶೀಲಿಸಿದರು.

ಕಾಲೇಜು ಬಳಿ ಸುದ್ಧಿಗಾರರೊಂದಿಗೆ ಮಾತನಾಡಿದ ಸಚಿವರು “ಕಟ್ಟಡ ನಿರ್ಮಾಣ ಕಾಮಗಾರಿ ಭರದಿಂದ ಸಾಗುತ್ತಿದ್ದು ಡಿಸೆಂಬರ್ ಅಂತ್ಯದೊಳಗೆ ಕಾಮಗಾರಿ ಪೂರ್ಣಗೊಳಿಸಿ, ಕಾಲೇಜಿಗೆ ಹಸ್ತಾಂತರ ಮಾಡುತ್ತೇವೆ ಎಂದು ಗುತ್ತಿಗೆದಾರರು ಭರವಸೆ ನೀಡಿದ್ದಾರೆ. ದ್ವಿತೀಯ, ತೃತೀಯ ಹಂತದ ಚಿಕಿತ್ಸೆಗೆ ಸೌಲಭ್ಯ ಸಿಗದೇ ಜಿಲ್ಲೆಯ ಜನ ಏನೇ ಆಪತ್ತು ಬಂದರೂ ಬೆಂಗಳೂರಿಗೆ ಹೋಗುವ ಸ್ಥಿತಿ ಇದೆ. ಜಿಲ್ಲೆಯಲ್ಲಿ ಸರ್ಕಾರಿ ವೈದ್ಯಕೀಯ ಶಿಕ್ಷಣ ಕಾಲೇಜು ನಿರ್ಮಾಣದಿಂದ ಚಿಕ್ಕಬಳ್ಳಾಪುರ, ಕೋಲಾರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಹೆಚ್ಚು ಅನುಕೂಲವಾಗಲಿದೆ. ವೈದ್ಯಕೀಯ ಶಿಕ್ಷಣ ಕಾಲೇಜಿಗೆ ಈಗಾಗಲೇ ಅಧ್ಯಾಪಕರನ್ನು ನೇಮಿಸಲಾಗಿದ್ದು ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ 100 ವಿದ್ಯಾರ್ಥಿಗಳಿಗೆ ಕೌನ್ಸೆಲಿಂಗ್ ನಡೆಸಲಾಗುತ್ತಿದೆ. ಎರಡು ದಿನಗಳಲ್ಲಿ ದಾಖಲಾಗುವ ವಿದ್ಯಾರ್ಥಿಗಳಿಗೆ ತಾತ್ಕಾಲಿಕವಾಗಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕಟ್ಟಡದಲ್ಲಿ ತರಗತಿಗಳು ನಡೆಯಲಿವೆ. 2023ರ ಸಂಕ್ರಾಂತಿ ವೇಳೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಕೇಂದ್ರ ಆರೋಗ್ಯ ಸಚಿವರಿಂದ ಕಾಲೇಜು ಉದ್ಘಾಟನೆಯಾಗಲಿದೆ” ಎಂದು ಹೇಳಿದರು.

Chikkaballapur Medical College Building Construction Site

ವೈದ್ಯಕೀಯ ಶಿಕ್ಷಣ ಇಲಾಖೆ ಕಾರ್ಯದರ್ಶಿ ನವೀನ್ ರಾಜ್ ಸಿಂಗ್, ಜಿಲ್ಲಾಧಿಕಾರಿ ಆರ್.ಲತಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಿ.ಶಿವಶಂಕರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್, ನಗರಸಭೆ ಅಧ್ಯಕ್ಷ ಆನಂದ್ ರೆಡ್ಡಿ,ಉಪವಿಭಾಗಾಧಿಕಾರಿ ಜಿ.ಸಂತೋಷ್ ಕುಮಾರ್, ತಹಶೀಲ್ದಾರ್ ಗಣಪತಿ ಶಾಸ್ತ್ರಿ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಕಾಮಗಾರಿಯನ್ನು ವೀಕ್ಷಿಸಿದರು.

 

- Advertisement -
 

 

For Daily Updates WhatsApp ‘HI’ to 7406303366

RELATED ARTICLES
- Advertisment -

Most Popular

Karnataka

India

You cannot copy content of this page