Saturday, July 27, 2024
HomeKarnatakaChikkaballapuraಓಬವ್ವ ಆತ್ಮ ರಕ್ಷಣಾ ಕೌಶಲ್ಯಗಳ ತರಬೇತಿ

ಓಬವ್ವ ಆತ್ಮ ರಕ್ಷಣಾ ಕೌಶಲ್ಯಗಳ ತರಬೇತಿ

Chikkaballapur : ಚಿಕ್ಕಬಳ್ಳಾಪುರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಇವರ ಸಂಯುಕ್ತಾಶ್ರಯದಲ್ಲಿ, ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಹಾಗೂ ವಸತಿ ಶಾಲೆಗಳ ವಿದ್ಯಾರ್ಥಿನಿಯರಿಗೆ “ಓಬವ್ವ ಆತ್ಮ ರಕ್ಷಣಾ ಕಲೆಯ ಕೌಶಲ್ಯಗಳ ತರಬೇತಿ” (Obavva Self Defence Art & Skills Training) ಕಾರ್ಯಕ್ರಮವನ್ನು ಮಂಗಳವಾರ ಚಿಕ್ಕಬಳ್ಳಾಪುರ ನಗರದ ಸರ್ಕಾರಿ ಪದವಿಪೂರ್ವ ಕಾಲೇಜು ಆವರಣದ ನಂದಿ ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಪೌರಾಡಳಿತ, ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕರ ಉದ್ದಿಮೆಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ನಾಗರಾಜು(MTB Nagaraj) ರವರು ” ರಾಜ್ಯ ಸರ್ಕಾರ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಮಹಿಳೆಯರ ಮೇಲಿನ ದೌರ್ಜನ್ಯ ಹಾಗೂ ಕಿರುಕುಳ ಪ್ರಕರಣಗಳನ್ನು ಶೂನ್ಯಗೊಳಿಸುವ ನಿಟ್ಟಿನಲ್ಲಿಹೆಣ್ಣು ಮಕ್ಕಳ ಆತ್ಮರಕ್ಷಣೆಗಾಗಿ ಈ ತರಬೇತಿಯನ್ನು ಜಾರಿಗೊಳಿಸಿದ್ದು ಹೈದರಾಲಿ ಸೈನ್ಯದ ನೂರಾರು ಸೈನಿಕರನ್ನು ಸದೆಬಡಿದು ಮದಕರಿ ನಾಯಕನ ಕೋಟೆಯನ್ನು ರಕ್ಷಿಸಿದ ವೀರ ಮಹಿಳೆ ಒನಕೆ ಓಬವ್ವ ಹೆಸರಿನಲ್ಲಿ ಹೆಣ್ಣು ಮಕ್ಕಳ ರಕ್ಷಣಾ ಕೌಶಲ ಕಲೆಗಳ ತರಬೇತಿ ನೀಡುತ್ತಿರುವುದು ಹೆಮ್ಮೆಯ ಸಂಗತಿ. ಸಮಾಜ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ವಿದ್ಯಾರ್ಥಿಗಳಿಗೆ ವಾರದಲ್ಲಿ ಮೂರು ದಿನಗಳ ಕಾಲ ಕರಾಟೆ ತರಬೇತಿ ನೀಡಲಾಗುತ್ತದೆ. ತರಬೇತಿ ಪಡೆದ ವಿದ್ಯಾರ್ಥಿನಿಯರು ಓಬವ್ವ ಅವರನ್ನು ಸ್ಫೂರ್ತಿಯಾಗಿಸಿಕೊಂಡು ಮನೋಸ್ಥೈರ್ಯ ಬೆಳೆಸಿಕೊಳ್ಳುವ ಜತೆಗೆ ತಮ್ಮನ್ನು ತಾವು ರಕ್ಷಣೆ ಮಾಡಿಕೊಳ್ಳುವ ಮೂಲಕ ಸಮಾಜದಲ್ಲಿ ಜವಾಬ್ದಾರಿಯುತ ಪ್ರಜೆಗಳಾಗಿ ಹೊರಹೊಮ್ಮಬೇಕು” ಎಂದು ಹೇಳಿದರು.

ಜಿಲ್ಲಾಧಿಕಾರಿ ಆರ್. ಲತಾ (Deputy Commissioner R. Latha), ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪಿ. ಶಿವಶಂಕರ್ (Zilla Panchayat CEO P. Shivashankar), ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಅಧ್ಯಕ್ಷ ಪ್ರೊ.ಕೋಡಿರಂಗಪ್ಪ (Kannada Sahitya Parishat District President Prof. Kodi Rangappa), ನಗರಸಭೆ ಅಧ್ಯಕ್ಷ ಆನಂದರೆಡ್ಡಿ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಶಿವಕುಮಾರ್, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಅಶೋಕ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಜಯರಾಮ್ ರೆಡ್ಡಿ ಕಾಯಕ್ರಮದಲ್ಲಿ ಪಾಲ್ಗೊಂಡಿದ್ದರು.

 

- Advertisement -
 

 

For Daily Updates WhatsApp ‘HI’ to 7406303366

RELATED ARTICLES
- Advertisment -

Most Popular

Karnataka

India

You cannot copy content of this page