Chikkaballapur : ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ‘ರಸ್ತೆ ಸುರಕ್ಷತಾ ಸಮಿತಿ ಸಭೆ’ (Road Safety committee Meeting) ಯನ್ನು ನಡೆಸಿ ಸಂಚಾರ ನಿಯಮಗಳ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸುವ ಕರಪತ್ರಗಳನ್ನು ಅಧಿಕಾರಿಗಳು ಬಿಡುಗಡೆ ಮಾಡಿದರು.
ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ” 18 ವರ್ಷದ ಒಳಗಿನವರು ವಾಹನ ಚಾಲನೆ ಮಾಡಿದರೆ ಅಥವಾ ಚಲಾಯಿಸಿ ಅಪಘಾತ ಮಾಡಿದರೆ ವಾಹನಗಳ ಮಾಲೀಕರ ವಾಹನ Driving Licence ರದ್ದುಗೊಳಿಸುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಮತ್ತು ಸಾರಿಗೆ ಇಲಾಖೆ ಅಧಿಕಾರಿಗಳು ಪರಿಶೀಲಿಸಿ ದಂಡ ವಿಧಿಸಬೇಕು. ಜಿಲ್ಲೆಯ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿಗಳಲ್ಲಿ 17 ಮತ್ತು ರಾಜ್ಯ ಹೆದ್ದಾರಿಗಳಲ್ಲಿ 11 ಬ್ಲಾಕ್ ಸ್ಪಾಟ್ ಗಳನ್ನು ಗುರುತಿಸಲಾಗಿದ್ದು ಈ ಬ್ಲಾಕ್‌ಸ್ಪಾಟ್‌ಗಳಿಗೆ ಸಂಬಂಧ ಪಟ್ಟ ಅಧಿಕಾರಿಗಳು ಭೇಟಿ ನೀಡಿ ತಪಾಸಣೆ ಮಾಡಬೇಕು. ಕಳೆದ 7 ತಿಂಗಳಲ್ಲಿ ಜಿಲ್ಲೆಯಲ್ಲಿ ಸಂಜೆ 6 ರಿಂದ 9ರವರೆಗೆ 118 ಅಪಘಾತಗಳು ಸಂಭವಿಸಿವೆ. ಈ ಅವಧಿಯಲ್ಲಿ ಸಾರಿಗೆ ಮತ್ತು ಪೊಲೀಸ್ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಹೆಚ್ಚಿನ ನಿಗಾ ವಹಿಸಬೇಕು” ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಾಲ್ ಚೌಕ್ಸೆ, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್ ಗಿರೀಶ್, ಪ್ರಾದೇಶಿಕ ಸಾರಿಗೆ ಅಧಿಕಾರಿ ವಿವೇಕಾನಂದ ರೈ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಮಹೇಶ್ ಕುಮಾರ್, ಕೆ.ಎಸ್.ಆರ್.ಟಿ.ಸಿ ವಿಭಾಗೀಯ ನಿಯಂತ್ರಣಾಧಿಕಾರಿ ವಿ.ಬಸವರಾಜು, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಕೆ.ಮಾದವಿ, ವಿವಿಧ ಇಲಾಖೆಗಳ ಅಧಿಕಾರಿಗಳು ಪಾಲ್ಗೊಂಡಿದ್ದರು.
The post ರಸ್ತೆ ಸುರಕ್ಷತಾ ಸಮಿತಿ ಸಭೆ appeared first on Chikkaballapur | Chikballapur | Chikkaballapura Latest Breaking New Stories | ಚಿಕ್ಕಬಳ್ಳಾಪುರ ಸುದ್ದಿ.