Thursday, May 23, 2024
HomeKarnatakaChikkaballapuraಹಿಮಂತ ಬಿಸ್ವಾ ಶರ್ಮಾ ವಿರುದ್ಧ Congress ಪ್ರತಿಭಟನೆ

ಹಿಮಂತ ಬಿಸ್ವಾ ಶರ್ಮಾ ವಿರುದ್ಧ Congress ಪ್ರತಿಭಟನೆ

Chikkaballpur : Congress ನಾಯಕ ರಾಹುಲ್ ಗಾಂಧಿ (Rahul Gandhi) ವಿರುದ್ಧ ಅಸ್ಸಾಂ ಮುಖ್ಯಮಂತ್ರಿ (Chief Minisiter of Assam, Himanta Biswa Sarma) ಹಿಮಂತ ಬಿಸ್ವಾ ಶರ್ಮಾ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂದು ಆರೋಪಿಸಿ ‌ಯುವ ಕಾಂಗ್ರೆಸ್ ಕಾರ್ಯಕರ್ತರು ಭಾನುವಾರ ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ಪ್ರತಿಭಟನಾ ಮೆರವಣಿಗೆ ನಡೆಸಿ ಶಿಡ್ಲಘಟ್ಟ ವೃತ್ತದಲ್ಲಿ ಸಮಾವೇಶಗೊಂಡು BJP ಹಾಗೂ ಹಿಮಂತ ಬಿಸ್ವಾ ಶರ್ಮಾ ವಿರುದ್ಧ ಘೋಷಣೆಗಳನ್ನು ಕೂಗಿ ಹಿಮಂತ ಬಿಸ್ವಾ ಶರ್ಮಾ ಪ್ರತಿಕೃತಿ ದಹಿಸಿ ಪ್ರತಿಭಟಿಸಿದರು(Protest).

ರಾಹುಲ್ ಗಾಂಧಿ ವಿರುದ್ಧ ಹಿಮಂತ ಬಿಸ್ವಾ ಮದ್ಯ ಸೇವಿಸಿ ಮತ್ತು ಮತಿಭ್ರಮಣೆಯಿಂದ ಹೇಳಿಕೆ ನೀಡಿದ್ದಾರೆ. ದೇಶಕ್ಕಾಗಿ ರಾಹುಲ್ ಗಾಂಧಿ ಅವರ ತಂದೆ ರಾಜೀವ್ ಗಾಂಧಿ ತಮ್ಮ ಪ್ರಾಣವನ್ನೇ ಅರ್ಪಿಸಿದ್ದಾರೆ ಎಂದು ಪ್ರತಿಭಟನಕಾರರು ಹೇಳಿದರು.

ಪ್ರತಿಭಟನೆಯಲ್ಲಿ ಮುಖಂಡರಾದ ಪುರದಗಡ್ಡೆ ಮುನೇಗೌಡ, ಕೃಷ್ಣಪ್ಪ, ಕೋಚಿಮುಲ್ ನಿರ್ದೇಶಕ ಭರಣಿ ವೆಂಕಟೇಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಯರಾಮ್, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸುಮಿತ್ರಮ್ಮ, ಅಡ್ಡಗಲ್ ಶ್ರೀಧರ್, ಜಗದೀಶ್, ಮುದಾಸೀರ್, ಗಿರೀಶ್, ನವೀನ್, ಅಫ್ರೀದ್, ತೌಫಿಕ್ ಹಾಗೂ ಯುವ ಕಾಂಗ್ರೆಸ್ ಪದಾಧಿಕಾರಿಗಳು ಉಪಸ್ಥಿತರಿದ್ದರು.

For Daily Updates WhatsApp ‘HI’ to 7406303366

RELATED ARTICLES
- Advertisment -

Most Popular

Karnataka

India

You cannot copy content of this page