
Chikkaballapur : ಜಿಲ್ಲೆಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ನೀಡಲಾಗುವ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಇದ್ದ ಕಾಲಾವಕಾಶವನ್ನು ಜನವರಿ 31, 2026 ರವರೆಗೆ ವಿಸ್ತರಿಸಲಾಗಿದೆ. ಅರ್ಹ ವಿದ್ಯಾರ್ಥಿಗಳು ಈ ಕೂಡಲೇ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ ಸೌಲಭ್ಯ ಪಡೆಯುವಂತೆ ಇಲಾಖೆ ತಿಳಿಸಿದೆ.
ಪಿಯುಸಿ ಮತ್ತು ಸಾಮಾನ್ಯ ಪದವಿ ಕೋರ್ಸ್‌ಗಳನ್ನು ಹೊರತುಪಡಿಸಿ, ಉಳಿದ ಮೆಟ್ರಿಕ್ ನಂತರದ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1ರ ಅಲೆಮಾರಿ ಮತ್ತು ಅರೆ ಅಲೆಮಾರಿ ವಿದ್ಯಾರ್ಥಿಗಳು ಈ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಬಹುದು. ಇದರಲ್ಲಿ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಶುಲ್ಕ ಮರುಪಾವತಿ ಮತ್ತು ಅಲೆಮಾರಿ ಜನಾಂಗದ ವಿಶೇಷ ವಿದ್ಯಾರ್ಥಿವೇತನ ಕಾರ್ಯಕ್ರಮಗಳು ಸೇರಿವೆ.
ಅರ್ಜಿ ಸಲ್ಲಿಸುವ ವಿಧಾನ: ಆಸಕ್ತ ವಿದ್ಯಾರ್ಥಿಗಳು ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶ (SSP) ಅಧಿಕೃತ ವೆಬ್‌ಸೈಟ್ https://ssp.postmatric.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ತಾಂತ್ರಿಕ ತೊಂದರೆ ಅಥವಾ ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 8050770005 ಅಥವಾ 1902 ಅನ್ನು ಸಂಪರ್ಕಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಚಿಕ್ಕಬಳ್ಳಾಪುರದ ಜಿಲ್ಲಾಡಳಿತ ಭವನದಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಚೇರಿಯನ್ನು ಅಥವಾ ದೂರವಾಣಿ ಸಂಖ್ಯೆ 08156-277053 ಅನ್ನು ಸಂಪರ್ಕಿಸಲು ಜಿಲ್ಲಾ ಅಧಿಕಾರಿ ಕೆ.ವಿ.ಮುನಿರತ್ನಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
For Daily Updates WhatsApp ‘HI’ to 7406303366
The post ವಿದ್ಯಾರ್ಥಿವೇತನ ಅರ್ಜಿ ಸಲ್ಲಿಕೆ ಅವಧಿ ಜ.31 ರವರೆಗೆ ವಿಸ್ತರಣೆ appeared first on Chikkaballapur | Chikballapur | Chikkaballapura Latest Breaking New Stories | ಚಿಕ್ಕಬಳ್ಳಾಪುರ ಸುದ್ದಿ.







