Chikkaballapur : ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನದಲ್ಲಿ ಮಂಗಳವಾರ ‘ಮಕ್ಕಳ ಹಕ್ಕುಗಳ ರಕ್ಷಣೆ’ (Child Protection) ಕುರಿತು ಪ್ರಗತಿ ಪರಿಶೀಲನಾ ಸಭೆ (KDP Meeting) ನಡೆಸಲಾಯಿತು.
ಸಭೆಯಲ್ಲಿ ರಾಜ್ಯ ಮಕ್ಕಳ ಆಯೋಗದ ಅಧ್ಯಕ್ಷ ಕೆ.ನಾಗಣ್ಣಗೌಡ ಮಾತನಾಡಿ “ನೀರು, ಪರಿಸರ, ಮಕ್ಕಳು ಈ ಮೂರನ್ನು ಬಿಟ್ಟು ಸಮಾಜವನ್ನು ಕಲ್ಪನೆ ಮಾಡಿಕೊಳ್ಳುವುದು ಸಾಧ್ಯವಿಲ್ಲ. ಮಕ್ಕಳು ದೇಶದ ಆಸ್ತಿ, ಮಕ್ಕಳ ಸಮಸ್ಯೆ, ನ್ಯೂನ್ಯತೆಗಳನ್ನು ಪರಿಹರಿಸುವ ಮೂಲಕ ಎಲ್ಲ ಮಕ್ಕಳಿಗೆ ರಕ್ಷಣೆ ನೀಡುವುದು ನಮ್ಮೆಲ್ಲರ ಸಾಮಾಜಿಕ ಜವಾಬ್ದಾರಿ. ಮಕ್ಕಳಿಗೆ ಅನ್ಯಾಯವಾಗುತ್ತಿದ್ದಲ್ಲಿ ಪ್ರಾಧಿಕಾರಗಳನ್ನು ಸಂಪರ್ಕಿಸಿ ನ್ಯಾಯ ಕೊಡಿಸುವ ಪ್ರವೃತ್ತಿಯನ್ನು ಎಲ್ಲರೂ ರೂಢಿಸಿಕೊಳ್ಳಬೇಕು. ಪ್ರಕರಣಗಳನ್ನು ಮುಚ್ಚಿಹಾಕುವ ಕೆಲಸವನ್ನು ಯಾರೊಬ್ಬರೂ ಮಾಡಬಾರದು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪೊಲೀಸ್ ಇಲಾಖೆ, ಶಿಕ್ಷಣ ಇಲಾಖೆ, ಮಕ್ಕಳ ರಕ್ಷಣಾ ಘಟಕ ಸೇರಿದಂತೆ ಇತರ ಇಲಾಖೆಗಳ ಸಹಯೋಗದಲ್ಲಿ ಸಾರ್ವಜನಿಕರಲ್ಲಿ ಅರಿವು ಮೂಡಿಸಿ ಬಾಲ್ಯ ವಿವಾಹ, ಭ್ರೂಣ ಹತ್ಯೆ, ಪ್ರಸವ ಪೂರ್ವ ಮತ್ತು ಗರ್ಭ ಪೂರ್ವ ಲಿಂಗಪತ್ತೆ, ಮಕ್ಕಳ ದೌರ್ಜನ್ಯ, ಪೋಕ್ಸೊ ಪ್ರಕರಣ ತಡೆಯುವ ನಿಟ್ಟಿನಲ್ಲಿ ಜವಾಬ್ದಾರಿ ನಿರ್ವಹಿಸಬೇಕಿದೆ” ಎಂದು ತಿಳಿಸಿದರು.
ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ, ಜಿಲ್ಲಾ ಪಂಚಾಯಿತಿ ಸಿಇಒ ಪ್ರಕಾಶ್ ಜಿ.ಟಿ.ನಿಟ್ಟಾಲಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಲ್ ಚೌಕ್ಸೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ವೆಂಕಟೇಶರೆಡ್ಡಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಮಹೇಶ್ ಕುಮಾರ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ತೇಜಾನಂದರೆಡ್ಡಿ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನೌತಾಜ್, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ರಾಮರಾಜೆಅರಸು ಉಪಸ್ಥಿತರಿದ್ದರು.
For Daily Updates WhatsApp ‘HI’ to 7406303366
The post ಮಕ್ಕಳ ಹಕ್ಕುಗಳ ರಕ್ಷಣೆ ಕುರಿತು ಪ್ರಗತಿ ಪರಿಶೀಲನಾ ಸಭೆ appeared first on Chikkaballapur | Chikballapur | Chikkaballapura | ಚಿಕ್ಕಬಳ್ಳಾಪುರ ಸುದ್ದಿ.