Chitradurga : ಚಿತ್ರದುರ್ಗ ಜಿಲ್ಲಾಧಿಕಾರಿ ಕಚೇರಿ (Deputy Commissioner) ಸಭಾಂಗಣದಲ್ಲಿ ಸೋಮವಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಆಯೋಜಿಸಿದ್ದ ‘ಕುಷ್ಠಮುಕ್ತ (Leprosy Awareness) ಭಾರತದ ಕಡೆಗೆ–ಸ್ಪರ್ಶ್ ಕುಷ್ಠರೋಗ ಜಾಗೃತಿ ಅಭಿಯಾನ’ಕ್ಕೆ ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ (Smt. Kavitha S Mannikeri) ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ “ಸ್ಪರ್ಶ್ ಕುಷ್ಠರೋಗ ಜಾಗೃತಿ ಅಭಿಯಾನವನ್ನು ಫೆ.13 ರವರೆಗೆ ಆಚರಿಸಲಾಗುತ್ತದೆ. ನಮ್ಮ ಬಳಿರುವ ಎಲ್ಲ ಸಂಪನ್ಮೂಲಗಳನ್ನು ಬಳಸಿಕೊಂಡು ಜಿಲ್ಲೆಯನ್ನು ‘ಕುಷ್ಠರೋಗ ಮುಕ್ತ ಜಿಲ್ಲೆ’ಯನ್ನಾಗಿಸಲು ಕ್ರಮ ಕೈಗೊಳ್ಳಲಾಗಿದೆ. . ದೌರ್ಜನ್ಯಕ್ಕೊಳಗಾದ ಕುಷ್ಠರೋಗಿಗಳನ್ನು ಮುಖ್ಯವಾಹಿನಿಗೆ ತಂದು, ಸರಿಯಾದ ಸಮಯಕ್ಕೆ ಸೂಕ್ತ ಚಿಕಿತ್ಸೆಗೊಳಪಡಿಸಿ ಬಾಪೂಜಿಯವರ ನಂಬಿಕೆ ಮತ್ತು ಸದುದ್ದೇಶಗಳನ್ನು ಸಾಕಾರಗೊಳಿಸಲು ಬದ್ಧ” ಎಂದು ಹೇಳಿದರು.
ಜಿಲ್ಲಾ ಕುಷ್ಠರೋಗ ನಿವಾರಣಾ ಅಧಿಕಾರಿ ಡಾ.ಕಂಬಾಳಿಮಠ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಆರ್.ರಂಗನಾಥ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಕಾಶೀ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಕೆ.ರವಿಶಂಕರ ರೆಡ್ಡಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಕೃಷ್ಣನಾಯ್ಕ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.