Bengaluru: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (MUDA) ಆಸ್ತಿಯ ಅಕ್ರಮ ಡಿನೋಟಿಫಿಕೇಶನ್ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ (CM Siddaramaiah) ವಿರುದ್ಧ ಬಿಜೆಪಿ ರಾಜ್ಯಪಾಲರಿಗೆ ದೂರು ನೀಡಿದೆ.
ಮೈಸೂರಿನ ಕೆಸರೆ ಗ್ರಾಮದ ಜಮೀನಿಗೆ ಸಂಬಂಧಿಸಿದ ಮುಡಾ ಹಗರಣದಲ್ಲಿ ಲೋಕಾಯುಕ್ತ ಪೊಲೀಸರಿಂದ clean chit ಪಡೆದಿದ್ದರೂ, ಹೊಸ ಡಿನೋಟಿಫಿಕೇಶನ್ ಪ್ರಕರಣದಲ್ಲಿ ಸಿದ್ದರಾಮಯ್ಯ ಮತ್ತೊಂದು ಸಂಕಷ್ಟ ಎದುರಿಸುವ ಸಾಧ್ಯತೆ ಇದೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (MUDA) ವಿಜಯನಗರ ಎರಡನೇ ಹಂತದ ಬಡಾವಣೆ ನಿರ್ಮಾಣಕ್ಕಾಗಿ ಹಿಣಕಲ್ ಗ್ರಾಮದ ಸರ್ವೇ ನಂ. 70/4ಎ ಜಾಗವನ್ನು 1985ರಲ್ಲಿ ಸ್ವಾಧೀನಪಡಿಸಿಕೊಂಡಿತ್ತು. ಈ ಭೂಮಿಯನ್ನು ಅಕ್ರಮವಾಗಿ ಡಿ-ನೋಟಿಫಿಕೇಶನ್ ಮಾಡಲಾಗಿದೆ ಎಂದು ಬಿಜೆಪಿ ನಾಯಕ ಎನ್ಆರ್ ರಮೇಶ್ ಆರೋಪಿಸಿದ್ದಾರೆ.
ಸಿದ್ದರಾಮಯ್ಯ ವಿರುದ್ಧದ ಗಂಭೀರ ಆರೋಪ
- 1997ರಲ್ಲಿ, ಅಂದಿನ ಮುಡಾ ಅಧ್ಯಕ್ಷ ಬಸವೇಗೌಡ, ರಾಜ್ಯ ಸರ್ಕಾರದ ಅನುಮೋದನೆಯಿಲ್ಲದೆ ಈ ಭೂಮಿಯನ್ನು ಡಿ-ನೋಟಿಫೈ ಮಾಡಿದರು.
- 27 ದಿನಗಳ ನಂತರ, ಉಪ ಮುಖ್ಯಮಂತ್ರಿ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಸಿದ್ದರಾಮಯ್ಯ, ಈ ಭೂಮಿಯಲ್ಲಿನ ಪ್ಲಾಟ್ ಸಂಖ್ಯೆ 3161 ಅನ್ನು 6.72 ಲಕ್ಷ ರೂ.ಗೆ ಖರೀದಿಸಿದ್ದರು.
- ಮುಡಾ ಕಾನೂನುಬದ್ಧವಾಗಿ ಸ್ವಾಧೀನಪಡಿಸಿಕೊಂಡ ಭೂಮಿಯನ್ನು ಖರೀದಿಸುವ ಮೂಲಕ ಅವರು ಅಧಿಕಾರ ದುರ್ಬಳಕೆ ಮಾಡಿದ್ದಾರೆ ಎಂದು ಬಿಜೆಪಿ ದೂರಿದೆ.
ಬಿಜೆಪಿ ಈ ಪ್ರಕರಣದ ತನಿಖೆಗೆ ಅನುಮತಿ ನೀಡುವಂತೆ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರಿಗೆ ಪತ್ರ ಬರೆದಿದ್ದು, ರಾಜ್ಯಪಾಲರು ಯಾವ ನಿರ್ಧಾರ ಕೈಗೊಳ್ಳುತ್ತಾರೆ ಎಂಬುದು ಗಮನಾರ್ಹ.