Home News ಮಳೆ ಹಾನಿ: CM Siddaramaiah ಸಭೆ

ಮಳೆ ಹಾನಿ: CM Siddaramaiah ಸಭೆ

CM Siddaramaiah Rain Damace Meeting

Bengaluru: ಕಳೆದ 15 ದಿನದಿಂದ ಕರ್ನಾಟಕದೆಲ್ಲೆಡೆ ಆರ್ಭಟಿಸುತ್ತಿರುವ ಮಳೆಯಿಂದಾಗಿ ಅವಾಂತರಗಳಿಗೆ (rain damage) ಕೊನೆಯಿಲ್ಲದಂತಾಗಿದೆ. ಸ್ವಲ್ಪ ಮಳೆ ಕಡಿಮೆಯಾಗಿದ್ರೂ ನಿತ್ಯ ಒಂದೊಂದೇ ಹೊಸ ಸಮಸ್ಯೆಗಳು ಸೃಷ್ಟಿಯಾಗುತ್ತಿವೆ.

ಹೀಗಾಗಿ ನಿನ್ನೆ ಡಿಸಿಎಂ ಡಿಕೆ ಶಿವಕುಮಾರ್ (DCM DK Shivakumar) ವಿಪತ್ತು ನಿರ್ವಹಣೆ ಕುರಿತು ಬಿಬಿಎಂಪಿ ಮುಖ್ಯ ಕಚೇರಿಯಲ್ಲಿ ಸಭೆ (BBMP head office) ಮಾಡಿ ಕೆಲ ನಿರ್ಧಾರಗಳನ್ನು ಕೈಗೊಂಡಿದ್ದರು.

ಇದೀಗ ಸಿಎಂ ಸಿದ್ದರಾಮಯ್ಯ (Siddaramaiah) ಕೂಡ ಮಳೆ ಹಾನಿ ಸಂಬಂಧ ಡಿಸಿ, ಜಿ.ಪಂ. ಸಿಇಒಗಳ ಜತೆ ಸಿಎಂ ಸಭೆ ಮಾಡಿದ್ದು, ಪ್ರಮುಖ ಸೂಚನೆಗಳನ್ನು ನೀಡಿದ್ದಾರೆ.

ನೆರೆ ಪೀಡಿತ ಪ್ರದೇಶಗಳಿಗೆ ಸ್ವತಃ ಡಿಸಿಗಳು ಭೇಟಿ ನೀಡಬೇಕು. ಪರಿಶೀಲನೆ ಮಾಡಿ ತಕ್ಷಣ ಪರಿಹಾರ ನೀಡಬೇಕು. ಯಾವುದೇ ಅನಾಹುತ ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಸೂಚನೆ ನೀಡಿದ್ದಾರೆ.

ರಾಜ್ಯದ ಹಲವು ಭಾಗಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಲಿದೆ. ಅಕ್ಟೋಬರ್‌ನಿಂದ ಡಿಸೆಂಬರ್​ವರೆಗೆ ಮಳೆ ಮುನ್ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಕಾವೇರಿ ಕಣಿವೆ ಮತ್ತು ಕೃಷ್ಣಾ ಕಣಿವೆಯಲ್ಲೂ ಉತ್ತಮ ನೀರು ಸಂಗ್ರಹವಿದೆ. ನೀರಾವರಿಗೆ ಸಮರ್ಪಕವಾಗಿ ನೀರು ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು, ಜಿ.ಪಂ. ಸಿಇಒಗಳಿಗೆ ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ.

ರಾಜ್ಯದಲ್ಲಿ ಈವರೆಗೆ 25 ಜನರು ಮಳೆಯಿಂದ ಮೃತಪಟ್ಟಿದ್ದಾರೆ. ಈ ಅವಧಿಯಲ್ಲಿ ಮಳೆಯಿಂದಾಗಿ 84 ಮನೆಗಳು ಸಂಪೂರ್ಣ ಹಾನಿಯಾಗಿದ್ದು, ರಾಜ್ಯದ ಹಲವೆಡೆ 2,074 ಮನೆಗಳು ಭಾಗಶಃ ಹಾನಿಗೀಡಾಗಿವೆ.

ಪೂರ್ತಿ ಮನೆ ಹಾನಿಗೆ 1.20 ಲಕ್ಷ ರೂ. ಪರಿಹಾರ ನೀಡಬೇಕು. ಸಣ್ಣಪುಟ್ಟ ಹಾನಿಯಾದರೆ 50 ಸಾವಿರ ರೂ. ಪರಿಹಾರ ಕೊಡುತ್ತೇವೆ. ಈ ಪರಿಹಾರ ನವೆಂಬರ್, ಅಕ್ಟೋಬರ್ ತಿಂಗಳಲ್ಲೂ ಅನ್ವಯ ಆಗಲಿದೆ.

ಜತೆಗೆ ಮನೆ ನಿರ್ಮಾಣ ಮಾಡಲು ಈಗಾಗಲೇ ಆದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.

ಬೆಳೆ ಹಾನಿ ಸುಮಾರು 105900 ಹಾನಿಯಾಗಿದೆ. ಜಂಟಿ ಸರ್ವೇ ಮಾಡಿ ವಾರದೊಳಗೆ ವರದಿ ನೀಡಲು ಹೇಳಿದ್ದೇವೆ.

ಕೃಷಿ ಜಮೀನು 9000 ಸಾವಿರ ಹೆಕ್ಟೇರ್, 30 ಸಾವಿರ ಹೆಕ್ಟೇರ್ ತೋಟಗಾರಿಕಾ ಪ್ರದೇಶ ಹಾನಿಯಾಗಿದೆ. 48 ಗಂಟೆಯಲ್ಲಿ ಪರಿಹಾರ ನೀಡಲು‌ ಹೇಳಿದ್ದೇನೆ

ಬಿತ್ತನೆ ಬೀಜ ನಷ್ಟ ಆಗಿದ್ದರೆ ಬೀಜ ಸರಬರಾಜು ಮಾಡಲು ಸೂಚನೆ‌ ನೀಡಿದ್ದೇವೆ. ಜಿಲ್ಲಾ ಮಂತ್ರಿಗಳಿಗೆ ಪತ್ರ ಬರೆದಿದ್ದೇನೆ.

ಎಲ್ಲಿ‌ ಪ್ರವಾಹ ಮನೆ ಹಾನಿ, ಜೀವ ಹಾನಿ, ಜಾನುವಾರ ಹಾನಿ ಆಗಿದೆ, ಅಲ್ಲಿ ಭೇಟಿ ನೀಡಿ ಸಾಂತ್ವನ ಹೇಳಿ‌ ಪರಿಹಾರ ನೀಡಲು ಸೂಚಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

For Daily Updates WhatsApp ‘HI’ to 7406303366

NO COMMENTS

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

The reCAPTCHA verification period has expired. Please reload the page.

You cannot copy content of this page

Exit mobile version