Chikkaballapur : ಚಿಕ್ಕಬಳ್ಳಾಪುರ ನಗರದ ಪಿಳ್ಳಪ್ಪ ಕಾಂಪ್ಲೆಕ್ಸ್ ಮುಂಭಾಗದಿಂದ ಶಿಡ್ಲಘಟ್ಟ ವೃತ್ತದವರೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ (CM Siddaramaiah) ರೋಡ್ ಷೊ(Road Show) ನಡೆಸಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಪರ ಮತಯಾಚಿಸಿದರು.
ಈ ಸಂಧರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ಧರಾಮಯ್ಯ “10 ವರ್ಷದಿಂದ ಅಧಿಕಾರದಲ್ಲಿರುವ ನರೇಂದ್ರ ಮೋದಿ ಅವರು ಈ ಬಾರಿ ಸೋಲುವುದು ಗ್ಯಾರಂಟಿ. ಪ್ರಧಾನಿಯಾಗಿ ಕೊಟ್ಟ ಮಾತಿನ ಪ್ರಕಾರ ನಡೆದುಕೊಂಡಿಲ್ಲ. ಸುಳ್ಳು ಹೇಳಿದ್ದೇ ನರೇಂದ್ರ ಮೋದಿ ಸಾಧನೆ. ವರ್ಷಕ್ಕೆ ಎರಡು ಕೋಟಿ ಉದ್ಯೋಗ ಸೃಷ್ಟಿಸುತ್ತೇವೆ, ಪೆಟ್ರೋಲ್, ಡೀಸೆಲ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಹೆಚ್ಚಳವಾಗಿದೆ. ನಾವು ಅಧಿಕಾರಕ್ಕೆ ಬಂದ 8 ತಿಂಗಳಲ್ಲಿ ಎಲ್ಲ ಗ್ಯಾರಂಟಿಗಳನ್ನು ಈಡೇರಿಸಿದ್ದೇವೆ. ರಾಜ್ಯ ಸರ್ಕಾರವು ಕೊಟ್ಟ ಮಾತಿನ ಪ್ರಕಾರ ನಡೆದಿದೆ” ಎಂದು ಹೇಳಿದರು.
ರೋಡ್ ಷೊನಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ, ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್, ಶಾಸಕ ಪ್ರದೀಪ್ ಈಶ್ವರ್, ವಿಧಾನ ಪರಿಷತ್ ಸದಸ್ಯರಾದ ನಜೀರ್ ಅಹಮದ್, ಎಂ.ಆರ್.ಸೀತಾರಾಮ್, ಮಾಜಿ ಶಾಸಕರಾದ ಎಸ್.ಎಂ.ಮುನಿಯಪ್ಪ, ಕೆ.ಪಿ. ಬಚ್ಚೇಗೌಡ, ಸಂಪಂಗಿ, ಅನಸೂಯಮ್ಮ, ವಿ.ಆರ್.ಸುದರ್ಶನ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೇಶವರೆಡ್ಡಿ ಮತ್ತಿತರರು ಪಾಲ್ಗೊಂಡಿದ್ದರು.
For Daily Updates WhatsApp ‘HI’ to 7406303366
The post ಮೋದಿ ಈ ಬಾರಿ ಸೋಲುವುದು ಗ್ಯಾರಂಟಿ : ಮುಖ್ಯಮಂತ್ರಿ ಸಿದ್ಧರಾಮಯ್ಯ appeared first on Chikkaballapur | Chikballapur | Chikkaballapura | ಚಿಕ್ಕಬಳ್ಳಾಪುರ.