Bengaluru: ವೀರ್ ಸಾವರ್ಕರ್ (Veer Savarkar) ವಿಚಾರದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Health Minister Dinesh Gundu Rao) ನೀಡಿದ ಹೇಳಿಕೆ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಗುಂಡೂರಾವ್ ತಮ್ಮ ಹೇಳಿಕೆಗೆ ಕ್ಷಮೆ ಕೇಳಬೇಕು, ಇಲ್ಲದಿದ್ದರೆ ಅವರ ವಿರುದ್ಧ ಹೋರಾಟ ನಡೆಸಬೇಕಾಗುತ್ತದೆ ಎಂದು ಬಲಪಂಥೀಯ ಸಂಘಟನೆಗಳು ಎಚ್ಚರಿಕೆ ಕೊಟ್ಟಿವೆ.
ಗಾಂಧಿ ಜಯಂತಿ (Gandhi Jayanti) ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದ ಸಚಿವ ದಿನೇಶ್ ಗುಂಡೂರಾವ್, ವೀರ್ ಸಾರ್ವಕರ್ ಬ್ರಾಹ್ಮಣ ಸಮುದಾಯದವರಾಗಿದ್ದರು. ಜೊತೆಗೆ, ಅವರು ಕೂಡ ಮಾಂಸಾಹಾರ ಸೇವಿಸುತ್ತಿದ್ದರು ಎಂದು ಹೇಳಿದ್ದರು.
ಸಚಿವರ ಹೇಳಿಕೆಗೆ BJPಯ ಐಟಿ ಸೆಲ್ ವ್ಯಂಗ್ಯವಾಗಿ ತಿರುಗೇಟನ್ನು ನೀಡಿ ಪ್ರಶ್ನೆಯೊಂದನ್ನು ಕೇಳಿದೆ. ವೀರ್ ಸಾವರ್ಕರ್ ಮಾಂಸ ತಿನ್ನುತ್ತಿದ್ದರು ಎಂದು ನಿಮಗೆ ಹೇಳಿದ್ದವರು ಯಾರು? ನಿಮ್ಮ ತಂದೆಯೋ ಅಥವಾ ನಿಮ್ಮ ಪತ್ನಿಯೋ ಎಂದು ಬಿಜೆಪಿ ಲೇವಡಿ ಮಾಡಿದೆ.
ಗುಂಡೂರಾವ್ ಹೇಳಿಕೆಗೆ ಪ್ರತಿಪಕ್ಷ ನಾಯಕ ಆರ್ ಅಶೋಕ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ನವರಿಗೆ ಹಿಂದುಗಳನ್ನು ಟೀಕೆ ಮಾಡುವುದೇ ಧರ್ಮ ಆಗಿದೆ. ಸಾವರ್ಕರ್ ಸತ್ತು ಸ್ವರ್ಗದಲ್ಲಿದ್ದಾರೆ, ಇನ್ನಾದರೂ ಬಿಡಿ ಅವರನ್ನು.
ಕೊನೆಗೆ ಹೆಣ್ಣು ಮಕ್ಕಳು ಬಳೆಯೂ ಹಾಕಬಾರದು ಎಂಬ ಮನಸ್ಥಿತಿಗೆ ಕಾಂಗ್ರೆಸ್ ಬಂದು ಬಿಡುತ್ತದೆ. ಇನ್ನಾದರೂ ನಿಮ್ಮ ಮನಸ್ಥಿತಿಯನ್ನು ಬದಲಿಸಿಕೊಳ್ಳಿ. ಟೀಕೆ ಮಾಡುವುದು ಹಿಂದುಗಳನ್ನು ಮಾತ್ರ, ಮುಸ್ಲಿಮರ ಬಗ್ಗೆ ಒಂದಾದರೂ ಮಾತಾಡಿದ್ದೀರಾ ಎಂದು ಅಶೋಕ್ ಪ್ರಶ್ನಿಸಿದ್ದಾರೆ.