
ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ (Rohit Sharma) ವಿರುದ್ಧ ಕಾಂಗ್ರೆಸ್ ವಕ್ತಾರೆ ಡಾ. ಶಮಾ ಮೊಹಮ್ಮದ್ ವಿವಾದಾತ್ಮಕ ಪೋಸ್ಟ್ ಮಾಡಿದ್ದು, ಇದರಿಂದ ದೇಶಾದ್ಯಂತ ಆಕ್ರೋಶ ವ್ಯಕ್ತವಾಗಿದೆ.
ಭಾರತದ ಯಶಸ್ವಿ ನಾಯಕರಲ್ಲಿ ಒಬ್ಬರಾದ ರೋಹಿತ್ ಶರ್ಮಾ ಅವರ ನಾಯಕತ್ವದ ಬಗ್ಗೆ ಟೀಕೆ ಮಾಡಿದ ಶಮಾ, “ರೋಹಿತ್ ಶರ್ಮಾ ದಪ್ಪವಾಗಿದ್ದಾರೆ! ತೂಕ ಇಳಿಸಿಕೊಳ್ಳಬೇಕು! ಅವರು ಭಾರತ ಕಂಡ ಅತ್ಯಂತ ಪ್ರಭಾವಶಾಲಿಯಲ್ಲದ ನಾಯಕ!” ಎಂದು ಎಕ್ಸ್‌ನಲ್ಲಿ (Twitter) ಪೋಸ್ಟ್ ಮಾಡಿದ್ದರು.
ಭಾರೀ ವಿವಾದ ಉಂಟಾಗುತ್ತಿದ್ದಂತೆ ಶಮಾ ಈ ಪೋಸ್ಟ್ ಅನ್ನು ಡಿಲೀಟ್ ಮಾಡಿದ್ದಾರೆ. ಆದರೆ ಅವರ ಹೇಳಿಕೆ ವಿರುದ್ಧ ಸೋಷಿಯಲ್ ಮೀಡಿಯಾದಲ್ಲಿ ಭಾರೀ ವಿರೋಧ ವ್ಯಕ್ತವಾಗುತ್ತಿದೆ.