Mysuru, Karnataka: ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಹೋರಾಟಗಾರ ಹಾಗೂ RTI ಕಾರ್ಯಕರ್ತ, ಸ್ನೇಹಮಯಿ ಕೃಷ್ಣ (Snehamayi Krishna) ವಿರುದ್ಧ ಮೈಸೂರು ನ್ಯಾಯಾಲಯ ಜಾಮೀನು ರಹಿತ ಬಂಧನ ವಾರಂಟ್ ಜಾರಿ ಮಾಡಿದೆ.
ಹಳೆ ಚೆಕ್ ಬೌನ್ಸ್ (Cheque Bounce) ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆಗೆ ಸ್ನೇಹಮಯಿ ಕೃಷ್ಣ ಅವರು ನ್ಯಾಯಾಲಯಕ್ಕೆ ಹಾಜರಾಗದ ಹಿನ್ನೆಲೆಯಲ್ಲಿ ಅಕ್ಟೋಬರ್ 1, ಮಂಗಳವಾರದಂದು ಮೈಸೂರಿನ ಮೂರನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು JMFC Court ವಾರಂಟ್ ಹೊರಡಿಸಿದೆ. 2015ರಲ್ಲಿ ಎನ್.ಕುಮಾರ್ ಅವರು ದಾಖಲಿಸಿದ್ದ ಪ್ರಕರಣವು ಪ್ರಸ್ತುತ ಸಾಕ್ಷ್ಯಾಧಾರದ ಹಂತದಲ್ಲಿದ್ದು, ಅಕ್ಟೋಬರ್ 1ರಂದು ವಿಚಾರಣೆ ನಿಗದಿಯಾಗಿತ್ತು.
ಸ್ನೇಹಮಯಿ ಕೃಷ್ಣ ಅವರ ಗೈರುಹಾಜರಿಯಿಂದಾಗಿ ನ್ಯಾಯಾಲಯ ಜಾಮೀನು ರಹಿತ ವಾರೆಂಟ್ ಹೊರಡಿಸಿ ಮುಂದಿನ ವಿಚಾರಣೆಯನ್ನು ನವೆಂಬರ್ 6ಕ್ಕೆ ಮುಂದೂಡಿತು. MUDA ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಭಾಗಿಯಾಗಿರುವ ಆರೋಪದ ಅಕ್ರಮಗಳ ವಿರುದ್ಧ ಹೋರಾಡುತ್ತಿರುವ ಸ್ನೇಹಮಯಿ ಕೃಷ್ಣ ಈಗ ತನ್ನದೇ ಕಾನೂನು ಸವಾಲುಗಳನ್ನು ಎದುರಿಸುತ್ತಿದ್ದಾರೆ.