Bengaluru: ಈಗ ರದ್ದಾದ ಚುನಾವಣಾ ಬಾಂಡ್ಗಳ (electoral bonds) ಮೂಲಕ ಕೋಟ್ಯಾಂತರ ರೂಪಾಯಿ ಸುಲಿಗೆ ಮಾಡಲಾಗಿದೆ ಎಂದು ಆರೋಪಿಸಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಸೇರಿದಂತೆ ಇತರರ ವಿರುದ್ಧ FIR ದಾಖಲಿಸುವಂತೆ ಬೆಂಗಳೂರಿನ (Bengaluru) ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ.
ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಪ್ರಕರಣಕ್ಕೆ ಸಂಬಂಧಿಸಿದಂತೆ FIR ದಾಖಲಿಸುವಂತೆ ಆದೇಶಿಸಿದೆ. ನಿರ್ಮಲಾ ಸೀತಾರಾಮನ್ (Nirmala Sitharaman) ಮತ್ತು ಇತರರ ವಿರುದ್ಧ ಪೊಲೀಸರು FIR ದಾಖಲಿಸಿದ್ದಾರೆ.
ಚುನಾವಣಾ ಬಾಂಡ್ಗಳ (electoral bonds) ಮೂಲಕ ಸುಲಿಗೆ ಮಾಡಲಾಗಿದೆ. ಹೀಗಾಗಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ನಳಿನ್ ಕುಮಾರ್ ಕಟೀಲು, ಬಿ.ವೈ.ವಿಜಯೇಂದ್ರ ವಿರುದ್ಧ ಜನಾಧಿಕಾರಿ ಸಂಘರ್ಷ ಪರಿಷತ್ನ(anaadhikara Sangharsha Sanghatane) (JSP) ಆದರ್ಶ ಆರ್. ಐಯ್ಯರ್ ಅವರು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಖಾಸಗಿ ದೂರು ಸಲ್ಲಿಸಿದ್ದರು.
ಈ ದೂರು ಸಂಬಂಧ ವಿಚಾರಣೆ ನಡೆಸಿದ 42ನೇ ಎಸಿಎಂಎಂ ಕೋರ್ಟ್, ದೂರಿನ ಪ್ರತಿ & ದಾಖಲೆ ಠಾಣೆಗೆ ಕಳುಹಿಸಲು ಸೂಚಿಸಿ ಆದೇಶ ಹೊರಡಿಸಿದೆ. ಬೆಂಗಳೂರಿನ ತಿಲಕ್ನಗರ ಠಾಣೆಗೆ ಕಳಿಸುವಂತೆ ಕೋರ್ಟ್ನ ಕಚೇರಿಗೆ 42ನೇ ಎಸಿಎಂಎಂ ಜಡ್ಜ್ ಸೂಚನೆ ನೀಡಿದ್ದಾರೆ. FIR ನಿರೀಕ್ಷೆಯಲ್ಲಿ ಎಂದು ವಿಚಾರಣೆ ಅ.10ಕ್ಕೆ ಮುಂದೂಡಲಾಗಿದೆ.
2019 ಏಪ್ರಿಲ್ ತಿಂಗಳಿನಿಂದ 2022ರ ಆಗಸ್ಟ್ ತಿಂಗಳವರೆಗೆ ಉದ್ಯಮಿ ಅನಿಲ್ ಅಗಲ್ವಾಲ್ ಅವರ ಸಂಸ್ಥೆಯಿಂದ ಸುಮಾರು 230 ಕೋಟಿ ರುಪಾಯಿ ಮತ್ತು ಅರೊಬಿಂದೋ ಫಾರ್ಮಸಿ ಸಂಸ್ಥೆಯಿಂದ 49 ಕೋಟಿ ರೂ.ನಷ್ಟು ಚುನಾವಣಾ ಬಾಂಡ್ ಗಳ ಮೂಲಕ ವಸೂಲಿ ಮಾಡಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.