Bengaluru, Bangalore : ಬೆಂಗಳೂರು ನಗರದಲ್ಲಿ Covid-19 ಪ್ರಕರಣಗಳು ಹೆಚ್ಚಾಗಿದ್ದು ಸಾರ್ವಜನಿಕರು ಇನ್ನು ಮುಂದೆ ಸಾರ್ವಜನಿಕ ಸ್ಥಳಗಳಲ್ಲಿ ಖಡಾಯವಾಗಿ Mask ಧರಿಸಿ ಅಂತರ ಕಾಯ್ದುಕೊಳ್ಳಬೇಕು ಎಂದು BBMPಮುಖ್ಯ ಆಯುಕ್ತ ತುಷಾರ್ ಗಿರಿನಾಥ್ (Tushar Girinath) ತಿಳಿಸಿದ್ದಾರೆ.
ಸುದ್ಧಿಗಾರರೊಂದಿಗೆ ಮಾತನಾಡಿದ ಆಯುಕ್ತರು “ಬೆಂಗಳೂರು ನಗರದಲ್ಲಿ Covid-19 ಪ್ರಕರಣಗಳ ಸಂಖ್ಯೆ 300 ದಾಟಿದ್ದು ರೋಗ ಲಕ್ಷಣ ಗಂಭೀರವಾಗಿ ಆಸ್ಪತ್ರೆಗೆ ದಾಖಲಾಗುವ ಪ್ರಕರಣಗಳೂ ಹೆಚ್ಚಾಗದರಿಂದ ಆತಂಕ ಪಡುವ ಅಗತ್ಯವಿಲ್ಲ. ಶಾಪಿಂಗ್ ಮಾಲ್, ಹೋಟೆಲ್, ರೆಸ್ಟೋರೆಂಟ್ ಸೇರಿ ಜನದಟ್ಟಣೆ ಪ್ರದೇಶದಲ್ಲಿ ಮಾಸ್ಕ್ ಧರಿಸಿದವರಿಗೆ ಮಾತ್ರ ಅವಕಾಶ ನೀಡಲು ಪಾಲಿಕೆ ಸೂಚನೆ ನೀಡಿದೆ. ಪರಿಸ್ಥಿತಿ ಬಿಗಡಾಯಿಸಿದರೆ ಮಾಸ್ಕ್ ಧರಿಸದವರಿಗೆ ದಂಡ ವಿಧಿಸುವ ಪದ್ಧತಿ ಮತ್ತೆ ಜಾರಿಗೆ ಬರಲಿದೆ” ಎಂದು ಹೇಳಿದರು.