Bengaluru: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (Lakshmi Hebbalkar) ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪದಲ್ಲಿ ಬಂಧಿತನಾದ ವಿಧಾನಪರಿಷತ್ ಬಿಜೆಪಿ ಸದಸ್ಯ ಸಿಟಿ ರವಿ BJP MLA C T Ravi,ಪ್ರಕರಣ ರಾಜಕೀಯ ಕುತೂಹಲಕ್ಕೆ ಕಾರಣವಾಗಿದೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಡಿಸೆಂಬರ್ 31ರಂದು ಮುಖ್ಯಮಂತ್ರಿಗಳ ಕಚೇರಿಗೆ ಪತ್ರ ಬರೆದಿದ್ದರೂ, ಇದಕ್ಕೆ ಪ್ರತಿಕ್ರಿಯೆ ಇಲ್ಲ ಎಂದು ಮೂಲಗಳಿಂದ ತಿಳಿದುಬಂದಿದೆ.
ರಾಜ್ಯಪಾಲರು ತಮ್ಮ ಪತ್ರದಲ್ಲಿ, ಬೆಳಗಾವಿಯಲ್ಲಿ ಸಿಟಿ ರವಿ ಅನುಭವಿಸಿದ ಘಟನೆಗಳ ಬಗ್ಗೆ ಮಾಹಿತಿಯನ್ನು ಪ್ರಸ್ತಾಪಿಸಿದ್ದಾರೆ. ಬೆಳಗಾವಿ ಪೊಲೀಸರು ಅವರನ್ನು ಕಸ್ಟಡಿಗೆ ತೆಗೆದುಕೊಂಡು, ಕಬ್ಬಿನ ಗದ್ದೆ, ಬಯಲುಸೀಮೆ, ಮತ್ತು ವಿವಿಧ ಪ್ರದೇಶಗಳಲ್ಲಿ ಕರೆದೊಯ್ದು ದೌರ್ಜನ್ಯವೆಸಗಿದ್ದಾರೆ ಎಂಬ ಆರೋಪವನ್ನು ಉಲ್ಲೇಖಿಸಲಾಗಿದೆ.
ಸಿಟಿ ರವಿ ಅವರು ತೀವ್ರ ಶಾರೀರಿಕ ಮತ್ತು ಮಾನಸಿಕ ಕಿರುಕುಳಕ್ಕೆ ಗುರಿಯಾಗಿದ್ದು, ತಮ್ಮ ಮೇಲೆ ಹಿಂಸಾತ್ಮಕ ವರ್ತನೆ ನಡೆದಿರುವುದಾಗಿ ದೂರಿದ್ದರು. ಖಾನಾಪುರ ಪೊಲೀಸ್ ಠಾಣೆಯಲ್ಲಿ ನೀಡಿದ ದೂರನ್ನು ಪೊಲೀಸ್ ಅಧಿಕಾರಿಗಳು ನಿರ್ಲಕ್ಷಿಸಿರುವುದನ್ನು ರಾಜ್ಯಪಾಲರು ತಮ್ಮ ಪತ್ರದಲ್ಲಿ ಹೇಳಿಕೊಂಡಿದ್ದಾರೆ.
ರಾಜ್ಯಪಾಲರು, ಈ ಪ್ರಕರಣದಲ್ಲಿ ತ್ವರಿತ ಕಾನೂನು ಕ್ರಮ ಕೈಗೊಳ್ಳುವಂತೆ ಮತ್ತು ಸಿಟಿ ರವಿಯ ಜೀವ ಭದ್ರತೆಗಾಗಿ ಸೂಕ್ತ ವ್ಯವಸ್ಥೆ ಮಾಡಬೇಕೆಂದು ಮುಖ್ಯಮಂತ್ರಿಗಳನ್ನು ಮನವಿ ಮಾಡಿದ್ದಾರೆ.
ರಾಜ್ಯಪಾಲರ ಈ ಗಂಭೀರ ಪತ್ರಕ್ಕೆ ಪ್ರತಿಕ್ರಿಯೆ ನೀಡದೇ ಸಿಎಂ ಕಚೇರಿ ಮೌನವಾಗಿದೆ. ಈ ಘಟನೆ ರಾಜ್ಯ ರಾಜಕಾರಣದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದ್ದು, ಮುಂದಿನ ಬೆಳವಣಿಗೆಗಳತ್ತ ಎಲ್ಲರ ದೃಷ್ಠಿ ಹರಿದಿದೆ.