Bengaluru: ಪ್ರದೇಶ ಯುವ ಕಾಂಗ್ರೆಸ್ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ (KPCC President D.K. Shivakumar) ನೂತನ ಪದಾಧಿಕಾರಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.
ಯುವ ಕಾಂಗ್ರೆಸ್‌ನ ನಿರ್ಗಮಿತ ಅಧ್ಯಕ್ಷ ಮಹಮ್ಮದ್ ನಲಪಾಡ್, ನೂತನ ಅಧ್ಯಕ್ಷ ಮಂಜುನಾಥ್ ಗೌಡ ಅವರಿಗೆ ಕಾಂಗ್ರೆಸ್ ಧ್ವಜ ಹಸ್ತಾಂತರಿಸಿ ಅಧಿಕಾರ ವರ್ಗಾಯಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ನಲಪಾಡ್, ಡಿ.ಕೆ. ಶಿವಕುಮಾರ್ ಅವರ ಮಾರ್ಗದರ್ಶನ ಹಾಗೂ ಬೆಂಬಲವಿಲ್ಲದೆ ತಾವು ಯುವ ಕಾಂಗ್ರೆಸ್ ಅಧ್ಯಕ್ಷರಾಗಲು ಸಾಧ್ಯವಾಗುತ್ತಿರಲಿಲ್ಲ ಎಂದು ಸ್ಮರಿಸಿದರು. ರಾಜಕೀಯದಲ್ಲಿ ಒಬ್ಬ ಒಳ್ಳೆಯ ನಾಯಕನ ಅವಶ್ಯಕತೆ ಇರುತ್ತದೆ ಮತ್ತು ತಮಗೆ ಡಿ.ಕೆ. ಶಿವಕುಮಾರ್ ಅವರಂತಹ ನಾಯಕ ಸಿಕ್ಕಿದ್ದು ಅದೃಷ್ಟ ಎಂದರು.
ತಾವು ಅಧ್ಯಕ್ಷರಾಗುವ ಸಂದರ್ಭದಲ್ಲಿ ತಮ್ಮ ವಿರುದ್ಧ ಕಾರ್ಯನಿರ್ವಹಿಸಿದ್ದವರನ್ನೂ ಒಟ್ಟಿಗೆ ಕರೆದುಕೊಂಡು ಹೋಗಲು ಯಶಸ್ವಿಯಾದ್ದಾಗಿ ಅವರು ತಿಳಿಸಿದರು. ಹೊಸ ಅಧ್ಯಕ್ಷ ಮಂಜುನಾಥ್ ಗೌಡರೂ ಸಹ ಎಲ್ಲರನ್ನೂ ಒಗ್ಗೂಡಿಸಿ ಕೊಂಡು ಹೋಗುವಂತೆ ಸಲಹೆ ನೀಡಿದರು.