
Chikkaballapur : ಚಿಕ್ಕಬಳ್ಳಾಪುರ ನಗರದಲ್ಲಿ ಸೋಮವಾರ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಸದಸ್ಯರಿಗೆ ಅಭಿನಂದನಾ ಸಮಾರಂಭ (Dairy Election Felicitation) ನಡೆಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಸಚಿವ ಡಾ.ಕೆ.ಸುಧಾಕರ್ “ರಾಜಕೀಯ ದುರುದ್ದೇಶದಿಂದ ಚಿಕ್ಕಬಳ್ಳಾಪುರ ಹಾಲು ಒಕ್ಕೂಟವನ್ನು ಕಾಂಗ್ರೆಸ್ ಸರ್ಕಾರವು ರದ್ದುಗೊಳಿಸಿ ರೈತರಿಗೆ ಅಪಮಾನ ಮಾಡಿದ್ದು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ರೈತರು ಕಾಂಗ್ರೆಸ್ ವಿರುದ್ಧ ಸೇಡು ತೀರಿಸಿಕೊಳ್ಳಲಿದ್ದಾರೆ. ಚ್.ಎನ್.ವ್ಯಾಲಿ ಮತ್ತು ಕೆ.ಸಿ ವ್ಯಾಲಿ ನೀರನ್ನು ಮೂರು ಹಂತದಲ್ಲಿ ಸಂಸ್ಕರಣೆ ಮಾಡಿ ಎಂದರೆ ಅದನ್ನು ಕೂಡ ಮಾಡಿಲ್ಲ. ಚಿಕ್ಕಬಳ್ಳಾಪುರ ಮಾತ್ರವಲ್ಲದೆ ರಾಜಧಾನಿ ಬೆಂಗಳೂರಿನಲ್ಲೂ ಈಗ ನೀರಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರು ಮಾರ್ಚ್ 15ರಂದು ದೇವನಹಳ್ಳಿಗೆ ಬರಲಿದ್ದಾರೆ. ಕಾರ್ಯಕರ್ತರು ಹಾಗೂ ರೈತರು ಉತ್ಸಾಹದಿಂದ ಅವರನ್ನು ಬರಮಾಡಿಕೊಳ್ಳಲಿದ್ದಾರೆ” ಎಂದು ತಿಳಿಸಿದರು.
ಸಭೆಯಲ್ಲಿ ಮುಖಂಡರಾದ ಡಿ.ಎಸ್.ಆನಂದರೆಡ್ಡಿ ಬಾಬು, ಕೆ.ವಿ.ನಾಗರಾಜ್, ಮರಳುಕುಂಟೆ ಕೃಷ್ಣಮೂರ್ತಿ, ಮುನೇಗೌಡ, ಕೇಶವರೆಡ್ಡಿ, ಬಿ.ವಿ.ಆನಂದ್ ಮತ್ತಿತರರು ಪಾಲ್ಗೊಂಡಿದ್ದರು.
For Daily Updates WhatsApp ‘HI’ to 7406303366
The post ಕಾಂಗ್ರೆಸ್ ಸರ್ಕಾರದಿಂದ ರೈತರಿಗೆ ಅಪಮಾನ : ಡಾ.ಕೆ.ಸುಧಾಕರ್ appeared first on Chikkaballapur | ಚಿಕ್ಕಬಳ್ಳಾಪುರ.