Chikkaballapur : ಚಿಕ್ಕಬಳ್ಳಾಪುರ ನಗರದಲ್ಲಿ ಹೊಸದಾಗಿ ನಿರ್ಮಾಣವಾಗುತ್ತಿರುವ ಗಾಂಧಿ ಭವನಕ್ಕೆ ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ (Deputy Commissioner P N Ravindra) ಸೋಮವಾರ ಭೇಟಿ ನೀಡಿ(Gandhi Bhavan Inspection) ಪರಿಶೀಲಿಸಿದರು.
ಅಂತಿಮ ಹಂತದಲ್ಲಿರುವ ಕಾಮಗಾರಿಯನ್ನು ಆದಷ್ಟು ಬೇಗ ಪೂರ್ಣಗೊಳಿಸಬೇಕು ಎಂದು ಎಂಜಿನಿಯರ್‌ಗೆ ಸೂಚಿಸಿದ ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ಮಹಾತ್ಮ ಗಾಂಧೀಜಿ ಅವರ ತತ್ವ, ಆದರ್ಶ, ಚಿಂತನೆಗಳನ್ನು ಮುಂದಿನ ಪೀಳಿಗೆಗೆ ತಲುಪಿಸುವ ನಿಟ್ಟಿನಲ್ಲಿ ₹ 3 ಕೋಟಿ ವೆಚ್ಚದಲ್ಲಿ ಪ್ರತಿ ಜಿಲ್ಲಾ ಕೇಂದ್ರದಲ್ಲಿ ಗಾಂಧಿ ಭವನ ನಿರ್ಮಾಣಕ್ಕೆ ಸರ್ಕಾರ ಮುಂದಾಗಿದೆ ಎಂದು ಸುದ್ಧಿಗಾರರಿಗೆ ತಿಳಿಸಿದರು.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಎಂ. ಜುಂಜಣ್ಣ, ಯೋಜನಾ ಅಭಿಯಂತರ ತೇಜಸ್ ರೆಡ್ಡಿ, ಮಂಜುನಾಥ್ ಮತ್ತಿತರರು ಉಪಸ್ಥಿತರಿದ್ದರು.
For Daily Updates WhatsApp ‘HI’ to 7406303366
The post ಗಾಂಧಿ ಭವನ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ : ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ appeared first on Chikkaballapur | Chikballapur | Chikkaballapura | ಚಿಕ್ಕಬಳ್ಳಾಪುರ ಸುದ್ದಿ.