New Delhi: ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ (Rekha Gupta) ಅವರ ಅಧಿಕೃತ ನಿವಾಸದಲ್ಲಿ ನಡೆದ ‘ಜನ್‌ಸುನ್ವಾಯಿ’ ಕಾರ್ಯಕ್ರಮದ ವೇಳೆ ಅಪರಿಚಿತ ವ್ಯಕ್ತಿ ಹಲ್ಲೆ ನಡೆಸಿದ್ದಾನೆ.
ಭಾರತೀಯ ಜನತಾ ಪಕ್ಷದ ದೆಹಲಿ ಘಟಕದ ಮುಖ್ಯಸ್ಥ ವೀರೇಂದ್ರ ಸಚ್ದೇವ ಈ ಹಲ್ಲೆಯನ್ನು ಖಂಡಿಸಿದ್ದಾರೆ.
35 ವರ್ಷದ ವ್ಯಕ್ತಿಯೊಬ್ಬ ದೂರುದಾರನಂತೆ ಬಂದು, ಮೊದಲು ಕೆಲವು ಕಾಗದಗಳನ್ನು ನೀಡಿದ ನಂತರ ಆಕೆಯ ಮೇಲೆ ಹಲ್ಲೆ ನಡೆಸಿದ್ದಾನೆ. ಕೂದಲನ್ನು ಎಳೆದು ಕಪಾಳಮೋಕ್ಷ ಮಾಡಿದ್ದಾನೆ. ಅದೃಷ್ಟವಶಾತ್, ಗುಪ್ತಾಗೆ ಯಾವುದೇ ಗಾಯಗಳಾಗಿಲ್ಲ.
ಹಲ್ಲೆಗಾರನನ್ನು ಪೊಲೀಸರು ತಕ್ಷಣ ಬಂಧಿಸಿದ್ದು, ಪ್ರಕರಣದ ಬಗ್ಗೆ ಹೆಚ್ಚಿನ ತನಿಖೆ ಆರಂಭವಾಗಿದೆ ಎಂದು ತಿಳಿಸಿದ್ದಾರೆ.
ದೆಹಲಿ ಕಾಂಗ್ರೆಸ್ ಮುಖ್ಯಸ್ಥ ದೇವೇಂದರ್ ಯಾದವ್ ಈ ಘಟನೆಯನ್ನು ಖಂಡಿಸಿ, “ಮುಖ್ಯಮಂತ್ರಿ ಸುರಕ್ಷಿತವಾಗಿಲ್ಲದಿದ್ದರೆ ಸಾಮಾನ್ಯ ಜನರು ಹೇಗೆ ಸುರಕ್ಷಿತರಾಗುತ್ತಾರೆ?” ಎಂದು ಪ್ರಶ್ನಿಸಿದ್ದಾರೆ.







