
ಜಾತಿಗಣತಿಯ ಹೊತ್ತಲ್ಲೇ ಲಿಂಗಾಯತ ಪ್ರತ್ಯೇಕ ಧರ್ಮದ (Lingayat religion) ಪ್ರಶ್ನೆ ಮತ್ತೆ ಬಿರುಕು ತಂದಿದೆ. ದಾವಣಗೆರೆಯ ಬಾಪೂಜಿ ಸಮುದಾಯ ಭವನದಲ್ಲಿ ನಡೆದ ಬಸವ ಸಂಸ್ಕೃತಿ ಬಹಿರಂಗ ಸಭೆಯಲ್ಲಿ, ಸಾಣೇಹಳ್ಳಿ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಜನಗಣತಿಯ ಧರ್ಮದ ಕಾಲಂನಲ್ಲಿ ಲಿಂಗಾಯತ ಎಂದು ಕಡ್ಡಾಯವಾಗಿ ಬರೆಯುವಂತೆ ಸೂಚಿಸಿದ್ದಾರೆ. ಅದೇ ರೀತಿ, ಪ್ರಧಾನಿಯನ್ನು ಭೇಟಿಯಾಗಿ ಅಧಿಕೃತ ಮನವಿ ಮಾಡುವ ನಿರ್ಧಾರವೂ ಕೈಗೊಳ್ಳಲಾಗಿದೆ.
ಶಿರಹಟ್ಟಿಯ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಈ ಬೇಡಿಕೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೆಲವರು ಸಮಾಜವನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.
ದಿಂಗಾಲೇಶ್ವರ ಸ್ವಾಮೀಜಿಗಳ ಮಾತಿಗೆ ವಚನಾನಂದ ಸ್ವಾಮೀಜಿ ತಿರುಗೇಟು ನೀಡಿದ್ದಾರೆ. ರಾಜ್ಯದಲ್ಲಿ ಪಂಚಮಸಾಲಿ ಸಮುದಾಯವೇ ಹೆಚ್ಚು, ಹೀಗಾಗಿ ಅಖಿಲ ಭಾರತ ವೀರಶೈವ ಲಿಂಗಾಯತ ಮತ್ತು ಜಾಗತಿಕ ಲಿಂಗಾಯತ ಮಹಾಸಭೆಗೆ ಪಂಚಮಸಾಲಿ ಪೀಠಗಳಿಗೂ ಸಂಬಂಧವಿಲ್ಲ ಎಂದು ಹೇಳಿದ್ದಾರೆ.
ಜಾತಿಗಣತಿ ಹತ್ತಿರವಾಗುತ್ತಿದ್ದಂತೆಯೇ ಲಿಂಗಾಯತ ವಿವಾದ ತೀವ್ರವಾಗುತ್ತಿದೆ. ಈಗ ನಡೆಯಲಿರುವ ಬೆಳವಣಿಗೆಗಳತ್ತ ಎಲ್ಲರ ಗಮನ ಹರಿಸಿದೆ.