
ಇತ್ತೀಚೆಗೆ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರ ದಾಳಿಯ (Pahalgam attack) ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷವು ಪ್ರಧಾನಮಂತ್ರಿ ನರೇಂದ್ರ ಮೋದಿಗೆ ವಿಶೇಷ ಅಧಿವೇಶನ ಕರೆಯುವಂತೆ ಒತ್ತಾಯಿಸಿದೆ.
ಈ ಕುರಿತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Congress President Mallikarjun Kharge) ಹಾಗೂ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಪತ್ರ ಬರೆದಿದ್ದಾರೆ. ಈ ದಾಳಿಯ ಬಗ್ಗೆ ರಾಷ್ಟ್ರೀಯ ಮಟ್ಟದಲ್ಲಿ ಚರ್ಚೆ ನಡೆಯಬೇಕು ಎಂಬ ಕಾರಣಕ್ಕಾಗಿ ಸಂಸತ್ತಿನ ಉಭಯ ಸದನಗಳಲ್ಲಿ ವಿಶೇಷ ಅಧಿವೇಶನ ನಡೆಸಬೇಕು ಎಂದು ಅವರು ಸೂಚಿಸಿದ್ದಾರೆ.
ಪತ್ರದಲ್ಲಿ ಖರ್ಗೆ ಅವರು, “ಇದು ಭಯೋತ್ಪಾದನೆ ವಿರುದ್ಧ ಭಾರತದ ಸಾಮೂಹಿಕ ಪ್ರತಿಕ್ರಿಯೆ ಹಾಗೂ ದೇಶದ ಏಕತೆ ತೋರಿಸಬಹುದಾದ ಸಮಯ. ಆದ್ದರಿಂದ ಇಂತಹ ಮಹತ್ವದ ಸಂದರ್ಭದಲ್ಲಿ ಭಿನ್ನಮತವಿಲ್ಲದೆ ಒಟ್ಟಾಗಿ ನಿಲ್ಲುವುದು ಅಗತ್ಯ” ಎಂದು ಹೇಳಿದ್ದಾರೆ.
ಏಪ್ರಿಲ್ 22ರಂದು ಅನಂತ್ನಾಗ್ ಜಿಲ್ಲೆಯ ಪಹಲ್ಗಾಮ್ ಪ್ರದೇಶದಲ್ಲಿ ಉಗ್ರರು ದಾಳಿ ನಡೆಸಿ 26 ಮಂದಿಯನ್ನು ಹತ್ಯೆಗೈದಿದ್ದಾರೆ. ಕೆಲವರಿಗೆ ಪ್ಯಾಂಟ್‌ಗಳನ್ನು ಬಿಚ್ಚಿಸಿ ಹಿಂದೂ ಎಂಬುದು ದೃಢಪಡಿಸಿಕೊಂಡ ನಂತರಲೇ ದಾಳಿ ನಡೆಸಲಾಗಿದೆ ಎನ್ನಲಾಗಿದೆ.
ಈ ಘಟನೆಯ ಜವಾಬ್ದಾರಿ ಲಷ್ಕರ್-ಎ-ತೊಯ್ಬಾದ ಟಿಆರ್ಎಫ್ ಸಂಘಟನೆ ಹೊತ್ತಿದ್ದು, ಶಂಕಿತ ಉಗ್ರರ ಮನೆಗಳನ್ನು ಸೈನಿಕರು ಧ್ವಂಸ ಮಾಡಿದ್ದಾರೆ. ಸರ್ಕಾರ ಈವರೆಗೆ ಸಾವಿನ ಅಂಕಿಅಂಶಗಳನ್ನು ಅಧಿಕೃತವಾಗಿ ಘೋಷಿಸಿಲ್ಲ.
ಈ ಭಯಾನಕ ಘಟನೆಯ ವಿರುದ್ಧ ದೇಶದಾದ್ಯಾಂತ ಆಕ್ರೋಶ ವ್ಯಕ್ತವಾಗಿದೆ. ರಾಹುಲ್ ಗಾಂಧಿ ಅವರೂ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, “ಭಾರತವು ಭಯೋತ್ಪಾದನೆಯ ವಿರುದ್ಧ ಒಗ್ಗಟ್ಟಿನಿಂದ ನಿಂತಿರುವುದನ್ನು ವಿಶ್ವದ ಮುಂದೆ ತೋರಿಸಬೇಕು” ಎಂದು ಹೇಳಿದ್ದಾರೆ.