Devanahalli : ದೇವನಹಳ್ಳಿ ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಖಾದಿ ಮತ್ತು ಗ್ರಾಮೋದ್ಯೋಗ ವಿಭಾಗದಿಂದ ಗ್ರಾಮೀಣ ಕೈಗಾರಿಕೆ ಸ್ಥಾಪನೆ ಬಗ್ಗೆ ವಿಚಾರ ಸಂಕಿರಣ ಮತ್ತು ಉಚಿತ ಕೌಶಲಾಭಿವೃದ್ಧಿ ಕುರಿತ ಒಂದು ದಿನದ ಅರಿವು ಕಾರ್ಯಾಗಾರ (Industrial workshop) ಹಮ್ಮಿಕೊಳ್ಳಾಲಾಗಿತ್ತು.
ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತಾನಾಡಿದ ಶಾಸಕ ನಿಸರ್ಗ ನಾರಾಯಣಸ್ವಾಮಿ (Nisarga Narayanaswamy) ” ಜಿಲ್ಲಾ ಖನಿಜ ಪ್ರತಿಷ್ಠಾನದಿಂದ ವಿವಿಧ ಇಲಾಖೆಗೆ ಒಟ್ಟು ₹ 9 ಕೋಟಿ ಅನುದಾನ ನೀಡಲಾಗಿದ್ದು ಸ್ವಾವಲಂಬಿ ಬದುಕು ರೂಪಿಸಿಕೊಳ್ಳಲು ಗ್ರಾಮೀಣ ಮಹಿಳೆಯರು ಸರ್ಕಾರದ ವಿವಿಧ ಇಲಾಖೆಗಳು ನೀಡುವ ಕೌಶಲಾಭಿವೃದ್ಧಿ ತರಬೇತಿ ಪಡೆಯಬೇಕು” ಎಂದು ತಿಳಿಸಿದರು.
ಜಿಲ್ಲಾ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ನಿರ್ದೇಶಕ ನರೇಂದ್ರಬಾಬು, PLD ಬ್ಯಾಂಕ್ ಮಾಜಿ ಅಧ್ಯಕ್ಷ ಆರ್. ಮುನೇಗೌಡ, ಪುರಸಭೆ ಸದಸ್ಯ ಜಿ.ಎ. ರವೀಂದ್ರ, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಉಪ ನಿರ್ದೆಶಕ ಮಹಮದ್ ರಫೀಕ್, ನಿರ್ದೇಶಕ ಮುಕುಂದ್, ವೆಂಕಟಗಿರಿ ಕೋಟೆ ಗ್ರಾ.ಪಂ. ಅಧ್ಯಕ್ಷ ಶ್ರೀನಿವಾಸ್, ಸದಸ್ಯ ಪ್ರಭಾಕರ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.