back to top
20.2 C
Bengaluru
Saturday, August 30, 2025
HomeBengaluru RuralDevanahalliನ.30 ರಂದು Devanahalli ಜಿಲ್ಲಾಮಟ್ಟದ ಯುವಜನೋತ್ಸವ

ನ.30 ರಂದು Devanahalli ಜಿಲ್ಲಾಮಟ್ಟದ ಯುವಜನೋತ್ಸವ

- Advertisement -
- Advertisement -

Devanahalli : ಈ ವರ್ಷದ ಜಿಲ್ಲಾಮಟ್ಟದ ಯುವಜನೋತ್ಸವವನ್ನು (Yuvajanotsava) ನವೆಂಬರ್ 30 ರಂದು ದೇವನಹಳ್ಳಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಆಯೋಜಿಸಲಾಗುವುದು. ಈ ಸಂಬಂಧ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿ ಎನ್. ಶಿವಶಂಕರ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ನೆಹರೂ ಯುವ ಕೇಂದ್ರದ ಸಹಯೋಗದಲ್ಲಿ ತಾಲ್ಲೂಕಿನ ಜಿಲ್ಲಾಡಳಿತ ಭವನದಲ್ಲಿ ಶನಿವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾಧಿಕಾರಿಗಳು ಮಾತನಾಡಿದರು.

ಯುವಜನೋತ್ಸವದಲ್ಲಿ 15 ರಿಂದ 29 ವರ್ಷ ವಯೋಮಾನದ ಯುವಕರು ಮತ್ತು ಯುವತಿಯರು ಭಾಗವಹಿಸಬಹುದಾಗಿದೆ. ನವೆಂಬರ್ 27ರವರೆಗೆ ನೋಂದಣಿ ಪ್ರಕ್ರಿಯೆ ತೆರೆಯಲಾಗಿದ್ದು, ಶಾಲಾ-ಕಾಲೇಜುಗಳಿಗೆ ಮಾಹಿತಿ ನೀಡಲು ಮತ್ತು ವಿದ್ಯಾರ್ಥಿಗಳ ಹೆಚ್ಚಿನ ಭಾಗವಹಿಸುವಿಕೆಯನ್ನು ಖಚಿತಪಡಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಯಿತು.

ಕಾರ್ಯಕ್ರಮ ಯಶಸ್ವಿಗಾಗಿ ಸಮಗ್ರ ಸಿದ್ಧತೆಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳನ್ನು ನಿರ್ದೇಶಿಸಲಾಯಿತು. ಹೆಚ್ಚಿನ ಮಾಹಿತಿಗಾಗಿ 9980590960 ಅಥವಾ 8328673178 ಗೆ ಸಂಪರ್ಕಿಸಬಹುದಾಗಿದೆ.

ಸಭೆಯಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಜಯಲಕ್ಷ್ಮೀ, ಜಿಲ್ಲಾ ನೆಹರೂ ಯುವ ಕೇಂದ್ರದ ಯುವ ಅಧಿಕಾರಿ ಶ್ರೀವಾಣಿ ಮತ್ತು ಇತರ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.

For Daily Updates WhatsApp ‘HI’ to 7406303366

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!

You cannot copy content of this page