Bengaluru: ಧರ್ಮಸ್ಥಳ ವಿರುದ್ಧ ನಡೆಯುತ್ತಿರುವ ಪ್ರಕರಣದ ಹಿಂದೆ ತಮಿಳುನಾಡು ಕಾಂಗ್ರೆಸ್ ಸಂಸದ ಹಾಗೂ ದಕ್ಷಿಣ ಕನ್ನಡದ ಮಾಜಿ ಡಿಸಿ ಸಸಿಕಾಂತ್ ಸೆಂಥಿಲ್ ಅವರ ಕೈವಾಡವಿದೆ ಎಂದು ಶಾಸಕ ಗಾಲಿ ಜನಾರ್ದನ ರೆಡ್ಡಿ ಆರೋಪ ಮಾಡಿದ್ದಾರೆ.
ರೆಡ್ಡಿ ಅವರು ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿ, ಮುಸುಕುಧಾರಿಯೂ ತಮಿಳುನಾಡಿನವನೇ, ಅವನಿಗೂ ಸೆಂಥಿಲ್‌ಗೂ ಸಂಪರ್ಕವಿದೆ ಎಂದರು. ಈ ಪ್ರಕರಣದಲ್ಲಿ ಎಸ್ಐಟಿ ತನಿಖೆಯಿಂದ ಸತ್ಯ ಬರುವುದಿಲ್ಲ, ಸಿಬಿಐ ಅಥವಾ ಎನ್ಐಎ ತನಿಖೆ ಅಗತ್ಯ ಎಂದು ಒತ್ತಾಯಿಸಿದರು. ಧರ್ಮಸ್ಥಳದ ಬಗ್ಗೆ ಎಡಪಂಥೀಯ ಶಕ್ತಿಗಳು ಸುಳ್ಳು ಪ್ರಚಾರ ನಡೆಸುತ್ತಿವೆ ಎಂದು ಆರೋಪಿಸಿದರು.
- “ಮುಸುಕುಧಾರಿ 13 ಕಡೆ ಹೆಣಗಳನ್ನು ಹೂತಿಟ್ಟಿದ್ದಾನೆ ಎನ್ನುವುದು ಸುಳ್ಳು. ಹಿಂದೂ ಪುಣ್ಯಕ್ಷೇತ್ರವನ್ನು ಅಪವಿತ್ರಗೊಳಿಸಲು ಕೆಲವರು ಯತ್ನಿಸುತ್ತಿದ್ದಾರೆ.”
- “ಸೆಂಥಿಲ್ ಕಾಂಗ್ರೆಸ್ ಹೈಕಮಾಂಡ್‌ಗೆ ರೈಟ್ ಹ್ಯಾಂಡ್ ಆಗಿದ್ದಾರೆ.”
- “ಸಿಎಂ ಸಿದ್ದರಾಮಯ್ಯ ಅಧಿಕಾರಕ್ಕೇ ಅಂಟಿಕೊಂಡಿದ್ದಾರೆ, ಡಿಸಿಎಂ ಡಿ.ಕೆ.ಶಿವಕುಮಾರ್ ಕೂಡಾ ದೊಡ್ಡ ಷಡ್ಯಂತ್ರ ಇದೆ ಎಂದು ಹೇಳಿದ್ದಾರೆ.”
ರೆಡ್ಡಿ ಅವರು ಸರ್ಕಾರಕ್ಕೆ ಎಚ್ಚರಿಕೆ ನೀಡುತ್ತಾ, “ಸಿಬಿಐ ಅಥವಾ ಎನ್ಐಎ ತನಿಖೆ ಆಗಲೇಬೇಕು. ಇಲ್ಲದಿದ್ದರೆ ನಾನು ಹೈಕೋರ್ಟ್, ಸುಪ್ರೀಂ ಕೋರ್ಟ್ ಮೊರೆ ಹೋಗುತ್ತೇನೆ” ಎಂದರು.