Saturday, September 7, 2024
HomeKarnatakaDharwadಚನ್ನವೀರಗೌಡ ಅಣ್ಣಾ ಪಾಟೀಲ ಗ್ರಂಥವನ್ನು ಬಿಡುಗಡೆಗೊಳಿಸಿದ CM

ಚನ್ನವೀರಗೌಡ ಅಣ್ಣಾ ಪಾಟೀಲ ಗ್ರಂಥವನ್ನು ಬಿಡುಗಡೆಗೊಳಿಸಿದ CM

Dharwad :ಭಾನುವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಚನ್ನವೀರಗೌಡ ಅಣ್ಣಾ ಶಿದ್ರಾಮ ಗೌಡ ಪಾಟೀಲ ದತ್ತಿ ಹಾಗೂ ಟ್ರಸ್ಟ್ ಉದ್ಘಾಟನೆ ಮಾಡಿ ಚನ್ನವೀರಗೌಡ ಅಣ್ಣಾ ಪಾಟೀಲ (Channa Veera Gowda Anna Patila) ಗ್ರಂಥವನ್ನು ಬಿಡುಗಡೆಗಳಿಸಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು ‘ಹುಬ್ಬಳ್ಳಿ–ಧಾರವಾಡದ (Hubli-Dharwad) ಅಭಿವೃದ್ಧಿ ಕುರಿತು ಸಾಕಷ್ಟು ಕನಸು ಹೊಂದಿರುವೆ ಇಲ್ಲಿನ ಮನೆಮಗನಾಗಿರುವ ನಾನು ತವರಿಗೆ ಹೂವನ್ನು ತರುತ್ತೇನೆಯೇ ಹೊರತು ಹುಲ್ಲನ್ನಲ್ಲ. ಇಲ್ಲಿನ ಜನ, ಗುರು ಹಿರಿಯರು, ನರೇಂದ್ರ ಮೋದಿ (Narendra Modi) ಹಾಗೂ ಅಮಿತ್ ಶಾ (Amit Shah) ಅವರ ಆಶೀರ್ವಾದದಿಂದ ಮುಖ್ಯಮಂತ್ರಿಯಾಗಿದ್ದೇನೆ. ನಿತ್ಯ 10ರಿಂದ 15 ಗಂಟೆ ದುಡಿದು ನಾಡಿನಲ್ಲಿ ಬದಲಾವಣೆ ತರಲು ಎಲ್ಲಾ ರೀತಿಯ ಪ್ರಯತ್ನ ಮಾಡುವ ಸಂಕಲ್ಪ ಮಾಡಿದ್ದೇನೆ. ಶಾಸಕರು ಹಾಗೂ ಸಚಿವರು ಸಂಪೂರ್ಣ ಸಹಕಾರ ನೀಡುತ್ತಿದ್ದು ನನ್ನ ಮೇಲೆ ದೊಡ್ಡ ಜವಾಬ್ದಾರಿಯೇ ಇದೆ.

ರಾಜ್ಯದಲ್ಲಿ ಕರ್ನಾಟಕ ವಿದ್ಯಾವರ್ಧಕ ಸಂಘಕ್ಕೆ ಮಹತ್ವದ ಸ್ಥಾನವಿದೆ ಕನ್ನಡ ಸಾಹಿತ್ಯ ಪರಿಷತ್ತು ಸೇರಿದಂತೆ ಕನ್ನಡದ ಹಲವು ಸಂಸ್ಥೆಗಳ ಸ್ಥಾಪನೆ, ಕರ್ನಾಟಕ ರಾಜ್ಯ ರಚನೆಗೆ ಈ ಸಂಘದ ಕೊಡುಗೆ ಅಪಾರವಾಗಿದ್ದು ಸಂಘಕ್ಕೆ ಅಗತ್ಯವಿರುವ ಅನುದಾನ, ನಿವೇಶನ ಮತ್ತಿತರ ಬೇಡಿಕೆಗಳಿಗೆ ಸರ್ಕಾರ ಸಕಾರಾತ್ಮವಾಗಿ ಸ್ಪಂದಿಸಲಿದೆ.

ರಾಣೆಬೆನ್ನೂರು ತಾಲ್ಲೂಕಿನ ಹಲಗೇರಿಯಲ್ಲಿ ಪಾಟೀಲ ಪುಟ್ಟಪ್ಪ ಅವರ ಸಾಧನೆಯನ್ನು ಗೌರವಿಸಲು ಸ್ಮಾರಕ ನಿರ್ಮಿಸಲಿದೆ. ಬ್ರಿಟಿಷರ ಆಳ್ವಿಕೆಯಲ್ಲಿ ಸಿವಿಲ್ ಎಂಜಿನಿಯರ್ ಆಗಿದ್ದ ಚನ್ನವೀರಗೌಡ ಅಣ್ಣಾ ಪಾಟೀಲ ಅವರು ಧಾರವಾಡಕ್ಕೆ ಲಿಂಗಾಯತ ಟೌನ್ ಹಾಲ್, ವೀರಶೈವ ಮಹಾಸಭಾ, ಕೆಸಿಸಿ ಬ್ಯಾಂಕ್ ಸ್ಥಾಪನೆ, ಪುಣೆ–ಬೆಂಗಳೂರು ರಸ್ತೆ ನಿರ್ಮಾಣ ಸೇರಿದಂತೆ ಹಲವು ಮಹತ್ವದ ಚಾರಿತ್ರಿಕ ಕಾರ್ಯಗಳನ್ನು ನಿರ್ವಹಿಸಿದ್ದಾರೆ’ ಎಂದು ಹೇಳಿದರು.

- Advertisement -

ಜವಳಿ ಖಾತೆ ಸಚಿವ ಶಂಕರ ಪಾಟೀಲ ಮುನೇನಕೊಪ್ಪ, ಡಾ. ಶಶಿಧರ ತೋಡಕರ್, ದೇವರಹುಬ್ಬಳ್ಳಿಯ ಸಿದ್ಧಾರೂಢಮಠದ ಶಿವಸಿದ್ಧಶಿವಯೋಗಿ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಎ.ಬಿ.ದೇಸಾಯಿ, ಸಂಘದ ಅಧ್ಯಕ್ಷ ಚಂದ್ರಕಾಂತ ಬೆಲ್ಲದ, ಗ್ರಂಥ ರಚನೆಕಾರ ಡಾ. ಮಲ್ಲಿಕಾರ್ಜುನ ಪಾಟೀಲ, ರೇಖಾ ಶೆಟ್ಟರ್, ಬಿ.ವೈ.ಬಂಡಿವಡ್ಡರ, ಶಶಿಕಾಂತ ನಾಯ್ಕ, ದತ್ತಿ ದಾನಿ ಸಿ.ಎಸ್.ಪಾಟೀಲ, ಎಸ್.ಸಿ.ಪಾಟೀಲ, ಶಂಕರ ಹಲಗತ್ತಿ, ಬಸವಪ್ರಭು ಹೊಸಕೇರಿ, ಶಿವಾನಂದ ಭಾವಿಕಟ್ಟಿ, ಶಂಕರ ಹಲಗತ್ತಿ ಮತ್ತಿತರರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

The reCAPTCHA verification period has expired. Please reload the page.
Captcha verification failed!
CAPTCHA user score failed. Please contact us!
- Advertisment -

Most Popular

Karnataka

India

You cannot copy content of this page