Chikkaballapur : ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರರವರ ನೇತೃತ್ವದಲ್ಲಿ ವಿಪತ್ತು ನಿರ್ವಹಣಾ ಪ್ರಾಧಿಕಾರದ ಜಿಲ್ಲಾ ಮಟ್ಟದ ಸಭೆ (District Level Disaster Management Authority Meeting) ನಡೆಸಲಾಯಿತು.
ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿಗಳು “ವಾಡಿಕೆ ಪ್ರಕಾರ ಕಳೆದ 7 ದಿನಗಳಲ್ಲಿ ಜಿಲ್ಲೆಯಲ್ಲಿ 25 ಮಿ.ಮೀಟರ್ ಮಳೆ ಆಗಬೇಕಾಗಿತ್ತು ಆದರೆ 87 ಮಿ. ಮೀಟರ್ ಮಳೆಯಾಗಿದೆ. ಮಳೆಯಿಂದ ಹಾನಿಯಾದ ಪ್ರದೇಶ, ಬೆಳೆಗಳು ಮತ್ತು ಮುಂದಿನ ಮಳೆಯ ಹಾನಿ ಬಗ್ಗೆ ಪರಿಶೀಲಿಸಿ ಸಂತ್ರಸ್ತರಿಗೆ ತುರ್ತು ಪರಿಹಾರ ನೀಡಬೇಕು. ಕಲ್ಲು ಮತ್ತು ಮಣ್ಣಿನಿಂದ ನಿರ್ಮಿಸಿರುವ ಕಚ್ಚಾ ಮನೆಗಳನ್ನು ಗುರುತಿಸಿ ಅಂತಹ ಮನೆಗಳ ಜನರನ್ನು ಸರ್ಕಾರದ ಸಮುದಾಯ ಭವನ ಅಥವಾ ಇತರ ಕಟ್ಟಡಗಳಿಗೆ ತಾತ್ಕಾಲಿಕವಾಗಿ ಸ್ಥಳಾಂತರಿಸಿ ಪುನರ್ವಸತಿ ಕೈಗೊಳ್ಳಬೇಕು. ಜಿಲ್ಲಾಡಳಿತದ ಎಲ್ಲ ಇಲಾಖೆ ಅಧಿಕಾರಿ, ಸಿಬ್ಬಂದಿ ಕೇಂದ್ರ ಸ್ಥಳಗಳಲ್ಲಿ ಇದ್ದು 24X7 ಕಾರ್ಯ ನಿರ್ವಹಿಸಬೇಕು” ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಪ್ರಕಾಶ್ ಜಿ.ಟಿ ನಿಟ್ಟಾಲಿ, ಹೆಚ್ಚುವರಿ ಜಿಲ್ಲಾಧಿಕಾರಿ ಎನ್ ಭಾಸ್ಕರ್, ಉಪವಿಭಾಗಾಧಿಕಾರಿ ಡಿ.ಎಚ್. ಅಶ್ವಿನ್, ಜಂಟಿ ಕೃಷಿ ನಿರ್ದೇಶಕಿ ಜಾವೀದಾ ನಸೀಮಾ ಖಾನಂ, ತಹಶೀಲ್ದಾರರು, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಣಾಧಿಕಾರಿಗಳು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಪಾಲ್ಗೊಂಡಿದ್ದರು.
For Daily Updates WhatsApp ‘HI’ to 7406303366
The post ಜಿಲ್ಲೆಯಾದ್ಯಂತ 7 ದಿನಗಳಲ್ಲಿ 87 ಮಿ. ಮೀಟರ್ ಮಳೆ: ಜಿಲ್ಲಾಧಿಕಾರಿ appeared first on Chikkaballapur | Chikballapur | Chikkaballapura | ಚಿಕ್ಕಬಳ್ಳಾಪುರ ಸುದ್ದಿ.