Bengaluru: ಯುವ ಕಾಂಗ್ರೆಸ್ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದ ನಿಮಿತ್ತ ಅರಮನೆ ಮೈದಾನ ಹಾಗೂ ನಗರದ ಇತರ ಭಾಗಗಳಲ್ಲಿ ಅನುಮತಿ ಇಲ್ಲದೆ ಫ್ಲೆಕ್ಸ್ (flex) ಅಳವಡಿಸಿದ್ದಕ್ಕೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಕೋಪಗೊಂಡಿದ್ದಾರೆ.
ಮಾರ್ಚ್ 17ರಂದು ಅರಮನೆ ಮೈದಾನದಲ್ಲಿ ಯುವ ಕಾಂಗ್ರೆಸ್ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ನಡೆಯಲಿದೆ. ಈ ಹಿನ್ನೆಲೆಯಲ್ಲಿ ನಗರದೆಲ್ಲೆಡೆ, ವಿಶೇಷವಾಗಿ ಪ್ಯಾಲೇಸ್ ರಸ್ತೆಯಲ್ಲಿ, ಬಿಬಿಎಂಪಿಯ ಅನುಮತಿ ಇಲ್ಲದೆ ಫ್ಲೆಕ್ಸ್ ಹಾಕಲಾಗಿತ್ತು. ಇದರಿಂದ ಕೋಪಗೊಂಡ ಡಿಕೆ ಶಿವಕುಮಾರ್, ಯುವ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.