Bengaluru: ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವ ಬದಲಾವಣೆ ವಿಚಾರದಲ್ಲಿ ಡಿಕೆ ಶಿವಕುಮಾರ್ (DK Shivakumar) ಹೊಸ ಸನ್ನಿವೇಶವನ್ನು ಉಂಟುಮಾಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನು ಕುರಿತು ಸಚಿವ ಸತೀಶ್ ಜಾರಕಿಹೊಳಿಯ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, “ನಾನು ಇಲ್ಲ, ಖರ್ಗೆ ಅವರನ್ನು ಕೇಳಿ” ಎಂದು ತಿಳಿಸಿದ್ದಾರೆ.
ಶಿವಕುಮಾರ್ ಅವರು ಈ ಸಂಬಂಧ ಮಾಧ್ಯಮಗಳಲ್ಲಿ ಮಾತನಾಡಿದ ಅವರು, “ಅಹಿಂದ ನಾಯಕರು ನನಗೆ ಪ್ರಶ್ನೆ ಕೇಳುತ್ತಿಲ್ಲ, ಅವರು ಖರ್ಗೆ ಅವರನ್ನು ಪ್ರಶ್ನಿಸುತ್ತಿದ್ದಾರೆ” ಎಂದು ಹೇಳಿದರು. “ನಾನು ಯಾವುದಾದರೂ ಮಾಹಿತಿ ನೀಡಬೇಕಾದರೆ, ನಾನೇ ಅದನ್ನು ಮಾಧ್ಯಮಗಳಿಗೆ ಹೇಳುತ್ತೇನೆ, ಆದರೆ ಯಾರೂ ಬಹಿರಂಗವಾಗಿ ಮಾತಾಡಬಾರದು” ಎಂದರು.
ಶ್ರಮಪಟ್ಟು ನಾನು ಪಕ್ಷವನ್ನು ಅಧಿಕಾರಕ್ಕೆ ತಂದಿದ್ದಲ್ಲ, ಕಾರ್ಯಕರ್ತರು ತಂದಿದ್ದು. ನಮ್ರತೆಯಿಂದ ಮನವಿ ಮಾಡ್ತೇನೆ, ಕಾಂಗ್ರೆಸ್ ಎಂಬುದು ಕಾರ್ಯಕರ್ತರ ಪಕ್ಷ ಎಂದು ಡಿಕೆ ಶಿವಕುಮಾರ್ ಹೇಳಿದರು.
ಮಹಾತ್ಮ ಗಾಂಧಿಯೇ ಎಲ್ಲವನ್ನೂ ತ್ಯಾಗ ಮಾಡಿದರು. ಅವರು ಮನಸ್ಸು ಮಾಡಿದ್ದರೆ ಪ್ರಧಾನಿ ಆಗುತ್ತಿರಲಿಲ್ಲವೇ ಎಂದು ಡಿಕೆ ಶಿವಕುಮಾರ್ ಪ್ರಶ್ನೆ ಮಾಡಿದರು.
ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆಗೆ ಪ್ರತಿಕ್ರಿಯಿಸಿದ ಸಚಿವ ಈಶ್ವರ್ ಖಂಡ್ರೆ, “ಪಕ್ಷದಲ್ಲಿ ಎಲ್ಲಾ ತೀರ್ಮಾನಗಳು ವರಿಷ್ಠರಿಂದ ಆಗುತ್ತವೆ. ಮಾಧ್ಯಮಗಳು ಮತ್ತು ಕೆಲವರು ಗೊಂದಲ ಉಂಟುಮಾಡುತ್ತಿದ್ದಾರೆ,” ಎಂದು ಹೇಳಿದರು.
“ನಾನು ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಿಸಲು ಒತ್ತಾಯಿಸಿಲ್ಲ, ನಾನು ಸಂಘಟನೆ ಸುಧಾರಣೆಗಾಗಿ ಸಲಹೆ ನೀಡಿದ್ದೇನೆ” ಎಂದು ಸತೀಶ್ ಜಾರಕಿಹೊಳಿ ಹೇಳಿದರು.