Shri Ghati Subramanya Temple, Doddaballapura, Bengaluru Rural : ಕರ್ನಾಟಕ ಸರ್ಕಾರ ಜಾರಿಗೆ ತಂದಿರುವ ವಾರಂತ್ಯದ ಕರ್ಫ್ಯೂ (Weekend Curfew) ಹಿನ್ನೆಲೆಯಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕಿನ ಘಾಟಿ ಕ್ಷೇತ್ರದಲ್ಲಿ ಜನವರಿ 8 ರಂದು ಸುಬ್ರಹ್ಮಣ್ಯಸ್ವಾಮಿ ಬ್ರಹ್ಮರಥೋತ್ಸವವು (Brahma Rathotsava) ದೇವಾಲಯದ ಆವರಣದಲ್ಲಿ ಮಾತ್ರ ನಡೆಯಲಿದ್ದು ದೇವಾಲಯದ ಸಿಬ್ಬಂದಿ ಹಾಗೂ ಅರ್ಚಕರು ಮಾತ್ರ ಭಾಗವಹಿಸಲಿದ್ದಾರೆ. ಸಾರ್ವಜನಿಕರ ಭಾಗವಹಿಸುವಿಕೆಯನ್ನು ನಿಷೇಧಿಸಲಾಗಿದೆ ಎಂದು ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ನಾಗರಾಜ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಘಾಟಿ ಸುಬ್ರಹ್ಮಣ್ಯಸ್ವಾಮಿ ದೇವಾಲಯಕ್ಕೆ ಹೋಗುವ ಗೌರಿಬಿದನೂರು-ದೊಡ್ಡಬಳ್ಳಾಪುರ (Gauribidanur-Doddaballapura) ಮುಖ್ಯ ರಸ್ತೆಯ ಕಂಟನಕುಂಟೆ ಹಾಗೂ ಮಾಕಳಿ ಸಮೀಪ ಬ್ಯಾರಿಕೇಡ್‌ಗಳನ್ನು ಹಾಕಿ ಭಕ್ತಾದಿಗಳ ಪ್ರವೇಶ ನಿರ್ಬಂಧಿಸಿರುವ ಬಗ್ಗೆ ಬ್ಯಾನರ್‌ಗಳನ್ನು ಹಾಕಲಾಗಿದೆ ಎಂದು ಗ್ರಾಮಾಂತರ ಪೊಲೀಸ್ ಠಾಣೆ ಇನ್‌ಸ್ಪೆಕ್ಟರ್ ಸತೀಶ್ ತಿಳಿಸಿದ್ದಾರೆ.