Home Karnataka Bengaluru Rural ಘಾಟಿ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮರಥೋತ್ಸವಕ್ಕೆ ಸಾರ್ವಜನಿಕರ ಪ್ರವೇಶ ನಿಷೇಧ

ಘಾಟಿ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮರಥೋತ್ಸವಕ್ಕೆ ಸಾರ್ವಜನಿಕರ ಪ್ರವೇಶ ನಿಷೇಧ

Shri Ghati Subramanya Temple, Doddaballapura, Bengaluru Rural : ಕರ್ನಾಟಕ ಸರ್ಕಾರ ಜಾರಿಗೆ ತಂದಿರುವ ವಾರಂತ್ಯದ ಕರ್ಫ್ಯೂ (Weekend Curfew) ಹಿನ್ನೆಲೆಯಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕಿನ ಘಾಟಿ ಕ್ಷೇತ್ರದಲ್ಲಿ ಜನವರಿ 8 ರಂದು ಸುಬ್ರಹ್ಮಣ್ಯಸ್ವಾಮಿ ಬ್ರಹ್ಮರಥೋತ್ಸವವು (Brahma Rathotsava) ದೇವಾಲಯದ ಆವರಣದಲ್ಲಿ ಮಾತ್ರ ನಡೆಯಲಿದ್ದು ದೇವಾಲಯದ ಸಿಬ್ಬಂದಿ ಹಾಗೂ ಅರ್ಚಕರು ಮಾತ್ರ ಭಾಗವಹಿಸಲಿದ್ದಾರೆ. ಸಾರ್ವಜನಿಕರ ಭಾಗವಹಿಸುವಿಕೆಯನ್ನು ನಿಷೇಧಿಸಲಾಗಿದೆ ಎಂದು ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ನಾಗರಾಜ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Doddaballapura Shri Ghati Subramanya Temple Brahma Rathotsava

ಘಾಟಿ ಸುಬ್ರಹ್ಮಣ್ಯಸ್ವಾಮಿ ದೇವಾಲಯಕ್ಕೆ ಹೋಗುವ ಗೌರಿಬಿದನೂರು-ದೊಡ್ಡಬಳ್ಳಾಪುರ (Gauribidanur-Doddaballapura) ಮುಖ್ಯ ರಸ್ತೆಯ ಕಂಟನಕುಂಟೆ ಹಾಗೂ ಮಾಕಳಿ ಸಮೀಪ ಬ್ಯಾರಿಕೇಡ್‌ಗಳನ್ನು ಹಾಕಿ ಭಕ್ತಾದಿಗಳ ಪ್ರವೇಶ ನಿರ್ಬಂಧಿಸಿರುವ ಬಗ್ಗೆ ಬ್ಯಾನರ್‌ಗಳನ್ನು ಹಾಕಲಾಗಿದೆ ಎಂದು ಗ್ರಾಮಾಂತರ ಪೊಲೀಸ್‌ ಠಾಣೆ ಇನ್‌ಸ್ಪೆಕ್ಟರ್‌ ಸತೀಶ್‌ ತಿಳಿಸಿದ್ದಾರೆ.

NO COMMENTS

LEAVE A REPLY

Please enter your comment!
Please enter your name here

You cannot copy content of this page

Exit mobile version