back to top
21.4 C
Bengaluru
Tuesday, October 7, 2025
HomeKarnatakaBengaluru Urbanಬೆಂಗಳೂರಿನಲ್ಲಿ NDA ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು

ಬೆಂಗಳೂರಿನಲ್ಲಿ NDA ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು

- Advertisement -
- Advertisement -

Bengaluru (Bangalore): ರಾಷ್ಟ್ರಪತಿ ಚುನಾವಣೆಯ (President Election) NDA ಮೈತ್ರಿಕೂಟದ ಅಭ್ಯರ್ಥಿ ದ್ರೌಪದಿ ಮುರ್ಮು (Draupadi Murmu) ಅವರು ರಾಜ್ಯ ನಾಯಕರ ಬೆಂಬಲ ಕೋರಲು ಬೆಂಗಳೂರಿಗೆ ಆಗಮಿಸಿದರು. ವಿಶೇಷ ವಿಮಾನದಲ್ಲಿ ಎಚ್‌ಎಎಲ್‌ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮುರ್ಮು ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai), BJP ರಾಜ್ಯ ಘಟಕದ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ (Nalin Kumar Kateel) ಸ್ವಾಗತಿಸಿದರು.

ಶಾಂಗ್ರಿಲಾ ಹೋಟೆಲ್‌ನಲ್ಲಿ ನಡೆದ ಬಿಜೆಪಿ ಸಂಸದರು, ಶಾಸಕರ ಸಭೆಯಲ್ಲಿ ಮುರ್ಮು ಪಾಲ್ಗೊಂಡು BJP ಶಾಸಕ ಬಿ.ಎಸ್‌.ಯಡಿಯೂರಪ್ಪ (B. S. Yediyurappa), ಕೇಂದ್ರ ಸಚಿವರಾದ ಪ್ರಲ್ಹಾದ ಜೋಶಿ (Pralhad Joshi), ಕಿಶನ್‌ ರೆಡ್ಡಿ (G. Kishan Reddy) ಸೇರಿದಂತೆ ಪಕ್ಷದ ನಾಯಕರ ಜತೆ ಸಮಾಲೋಚನೆ ನಡೆಸಿದರು.

ರಾಜ್ಯಸಭಾ ಸದಸ್ಯರೂ ಆಗಿರುವ ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ (H. D. Deve Gowda) ರ ನಿವಾಸಕ್ಕೆ ಭೇಟಿ ನೀಡಿದ ದ್ರೌಪದಿ ಮುರ್ಮು ಅವರು ರಾಷ್ಟ್ರಪತಿ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸುವಂತೆ ಮನವಿ ಮಾಡಿದರು. ಈ ವೇಳೆ ದೇವೇಗೌಡರ ಪತ್ನಿ ಚನ್ನಮ್ಮ, ಮಕ್ಕಳಾದ ಎಚ್‌.ಡಿ. ರೇವಣ್ಣ (H. D. Revanna), ಎಚ್‌.ಡಿ. ಕುಮಾರಸ್ವಾಮಿ (H. D. Kumaraswamy) ಸೇರಿದಂತೆ ಅವರ ಕುಟುಂಬದ ಸದಸ್ಯರು ಮುರ್ಮು ಅವರನ್ನು ಸನ್ಮಾನಿಸಿದರು.

For Daily Updates WhatsApp ‘HI’ to 7406303366

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!

You cannot copy content of this page