New Delhi : ಭಾರತದ 15 ನೇ ರಾಷ್ಟ್ರಪತಿಯಾಗಿ (15th President of India) ದ್ರೌಪದಿ ಮುರ್ಮು (Draupadi Murmu) ಅವರು ಇಂದು ಸಂಸತ್ತಿನ ಸೆಂಟ್ರಲ್ ಹಾಲ್‌ನಲ್ಲಿ (Central Hall) ನಡೆದ ಕಾರ್ಯಕ್ರಮದಲ್ಲಿ ಪ್ರಮಾಣವಚನ (oath) ಸ್ವೀಕರಿಸಿದ್ದರು. ಸುಪ್ರೀಂ ಕೋರ್ಟ್ (Supreme Court) ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ (NV Ramana) ದ್ರೌಪದಿ ಮುರ್ಮು ಅವರಿಗೆ ಪ್ರಮಾಣ ವಚನ ಬೋಧಿಸಿದರು.
ದೇಶದ ಜನರಿಗೆ ಧನ್ಯವಾದ ಅರ್ಪಿಸಿ ಮಾತನಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು “ದೇಶದ ಜನರ ಆಶೀರ್ವಾದದಿಂದ ಇಲ್ಲಿವರೆಗೆ ಪ್ರಯಾಣ ನಡೆಯುತ್ತಿದ್ದು ದೇಶದ ಕೋಟ್ಯಾಂತರ ಮಹಿಳೆಯರು ಮತ್ತು ಯುವತಿಯರ ಕನಸಿನ ಶಕ್ತಿ ನನ್ನ ಜೊತೆ ಇದೆ. ಬಡವರ ಮನೆಯಲ್ಲಿ ಜನಿಸಿದ ಹೆಣ್ಣು ಮಗಳು ದೂರದ ಬುಡಕಟ್ಟು ಪ್ರದೇಶದಲ್ಲಿ ಹುಟ್ಟಿ ಭಾರತದ ಅತ್ಯುನ್ನತ ಸಾಂವಿಧಾನಿಕ ಹುದ್ದೆಯನ್ನು ತಲುಪುವುದು ನಮ್ಮ ಪ್ರಜಾಪ್ರಭುತ್ವದ ಶಕ್ತಿಯಾಗಿದೆ” ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ನಿರ್ಗಮಿತ ರಾಷ್ಟ್ರಪತಿ ರಾಮನಾಥ್ ಕೋವಿಂದ್ (Ram Nath Kovind), ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು (M. Venkaiah Naidu), ಲೋಕಸಭೆ ಸ್ಪೀಕರ್ ಓಂ ಬಿರ್ಲಾ(Om Birla), ಪ್ರಧಾನಿ ನರೇಂದ್ರ ಮೋದಿ (Narendra Modi), ಕಾಂಗ್ರೆಸ್ ಅಧ್ಯೆಕ್ಷೆ ಸೋನಿಯಾ ಗಾಂಧಿ (Sonia Gandhi), ಸೇರಿದಂತೆ ಕೇಂದ್ರ ಸಚಿವರು, ಸಂಸದರು ಮತ್ತು ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಭಾಗವಹಿಸಿದ್ದರು.
Image : Sansad TV