ಬೆಂಗಳೂರು: ದುಲೀಪ್ ಟ್ರೋಫಿ ಕ್ರಿಕೆಟ್ ಟೂರ್ನಿಯ ಸೆಮಿಫೈನಲ್ ಪಂದ್ಯಗಳು ಗುರುವಾರ ಆರಂಭವಾದವು. ಬಿಸಿಸಿಐ ಮೈದಾನದಲ್ಲಿ ಒಂದೇ ಸಮಯದಲ್ಲಿ ಎರಡು ಪಂದ್ಯಗಳು ನಡೆಯುತ್ತಿವೆ.
ಮೊದಲ ಸೆಮಿಫೈನಲ್‌ನಲ್ಲಿ ದಕ್ಷಿಣ ವಲಯ ಮತ್ತು ಉತ್ತರ ವಲಯ ಸೆಣಸುತ್ತಿವೆ. ಇನ್ನೊಂದು ಪಂದ್ಯದಲ್ಲಿ ಪಶ್ಚಿಮ ವಲಯ ಹಾಗೂ ಕೇಂದ್ರ ವಲಯ ಮುಖಾಮುಖಿಯಾಗಿವೆ.
ಪಶ್ಚಿಮ ವಲಯ ಪರ ಶ್ರೇಯಸ್ ಅಯ್ಯರ್, ಯಶಸ್ವಿ ಜೈಸ್ವಾಲ್, ಶಾರ್ದೂಲ್ ಠಾಕೂರ್ ಆಡುತ್ತಿದ್ದಾರೆ. ಕೇಂದ್ರ ತಂಡದಲ್ಲಿ ಧ್ರುವ್ ಜುರೆಲ್ ಮತ್ತು ರಜತ್ ಪಾಟೀದಾರ್ ಇದ್ದಾರೆ.
ಕೇಂದ್ರ ವಲಯ ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದ ಪಶ್ಚಿಮ ವಲಯ ನಾಯಕ ಶಾರ್ದೂಲ್ ಠಾಕೂರ್ ಮೊದಲು ಬ್ಯಾಟಿಂಗ್ ಮಾಡಲು ತೀರ್ಮಾನಿಸಿದರು. ಯಶಸ್ವಿ ಜೈಸ್ವಾಲ್ ಹಾಗೂ ವಿಕೆಟ್ ಕೀಪರ್ ಹಾರ್ವಿಕ್ ದೇಸಾಯಿ ಇನ್ನಿಂಗ್ಸ್ ಆರಂಭಿಸಿದ್ದಾರೆ.
ಇದಕ್ಕೊಡ್ಡಾಗಿ ದಕ್ಷಿಣ ವಲಯದ ನಾಯಕತ್ವವನ್ನು ಅಜರುದ್ದೀನ್ ವಹಿಸಿಕೊಂಡಿದ್ದಾರೆ. ಕರ್ನಾಟಕದ ದೇವದತ್ ಪಡಿಕ್ಕಲ್ ಮತ್ತು ವೇಗಿ ವಾಸುಕಿ ಕೌಶಿಕ್ ಅವರ ಜೊತೆ ಕಣಕ್ಕಿಳಿದಿದ್ದಾರೆ.