New Delhi : ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ (National Herald Case) ಸಂಭಂದಿಸಂದಂತೆ ಜಾರಿ ನಿರ್ದೇಶನಾಲಯವು (The Enforcement Directorate) (ED) ಕಾಂಗ್ರೆಸ್ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರಿಗೆ ಸಮನ್ಸ್ (Summons) ಜಾರಿ ಮಾಡಿ ‘ಯಂಗ್ ಇಂಡಿಯನ್’ (Young Indian Company) ಹಣ ವರ್ಗಾವಣೆ ಪ್ರಕರಣದ ತನಿಖೆ ವೇಳೆ ಹಾಜರಿರುವಂತೆ ಸೂಚಿಸಿದೆ.
ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ‘ಯಂಗ್ ಇಂಡಿಯನ್’ ಪ್ರಕಾಶನ ಸಂಸ್ಥೆಗೆ ಸಂಬಂಧಿಸಿದ 12ಕ್ಕೂ ಹೆಚ್ಚು ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯವು ಶೋಧ ಕಾರ್ಯಾಚರಣೆ ನಡೆಸಿ ಬುಧವಾರ ಹೆರಾಲ್ಡ್ ಹೌಸ್ (Herald House)ನ ಒಂದು ಭಾಗಕ್ಕೆ ಬೀಗ ಜಡಿದಿದೆ.
ಈಗಾಗಲೇ ಜಾರಿ ನಿರ್ದೇಶನಾಲಯವು (ED) ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ (Sonia Gandhi) ಮತ್ತು ರಾಹುಲ್ ಗಾಂಧಿ (Rahul Gandhi) ಯವರನ್ನು ವಿಚಾರಣೆ ನಡೆಸಿದ್ದು ಈಗ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸಮನ್ಸ್ ಜಾರಿ ಮಾಡಿದೆ.