Chikkaballapur : ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ ಸೋಮವಾರ ಮುಸ್ಲಿಮರು ಪ್ರವಾದಿ ಮುಹಮ್ಮದ್ ಪೈಗಂಬರರ ಜನ್ಮದಿನವಾದ ‘ಈದ್ ಮಿಲಾದ್’ (Eid Milad) ಹಬ್ಬವನ್ನು ಆಚರಿಸಿದರು.
ಚಿಕ್ಕಬಳ್ಳಾಪುರದ ನಗರಸಭೆ ವೃತ್ತದಿಂದ ಬಜಾರ್ ರಸ್ತೆ, ಬಿ.ಬಿ.ರಸ್ತೆ, ಎಂ.ಜಿ.ರಸ್ತೆ ಮೂಲಕ ಮೆರವಣಿಗೆ ಸಾಗಿ ಪ್ರಶಾಂತ್ ನಗರ ಈದ್ಗಾ ಮೈದಾನ ತಲುಪಿತು. ಧರ್ಮಗುರುಗಳ ನೇತೃತ್ವದಲ್ಲಿ ಮುಸ್ಲಿಮರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.
ಶಿಡ್ಲಘಟ್ಟ :
ಶಿಡ್ಲಘಟ್ಟ ನಗರದಲ್ಲಿ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಮುಸ್ಲಿಮರು ಮೆರವಣಿಗೆಯಲ್ಲಿ ಈದ್ಗಾ ಮೈದಾನಕ್ಕೆ ತೆರಳಿ ಪ್ರಾರ್ಥನೆ ಸಲ್ಲಿಸಿದರು.
ಚಿಂತಾಮಣಿ :
ಚಿಂತಾಮಣಿ ನಗರದ ದೊಡ್ಡಪೇಟೆಯ ಜಾಮಿಯಾ ಮಸೀದಿಯಿಂದ ನೆಕ್ಕುಂದಿಪೇಟೆ, ಮಹಬೂಬ್‌ನಗರ, ದೊಡ್ಡಪೇಟೆ, ಅಜಾದ್‌ಚೌಕ, ಎಂ.ಜಿ.ರಸ್ತೆ, ಬಾಗೇಪಲ್ಲಿ ವೃತ್ತ ಸೇರಿದಂತೆ ಪ್ರಮುಖ ರಸ್ತೆಗಳ ಮೂಲಕ ಮೆರವಣಿಗೆ ಸಾಗಿ ಬಾಗೇಪಲ್ಲಿ ವೃತ್ತದಲ್ಲಿರುವ ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.
For Daily Updates WhatsApp ‘HI’ to 7406303366
The post ಜಿಲ್ಲೆಯಾದ್ಯಂತ ಈದ್ ಮಿಲಾದ್ ಸಂಭ್ರಮ appeared first on Chikkaballapur | Chikballapur | Chikkaballapura | ಚಿಕ್ಕಬಳ್ಳಾಪುರ ಸುದ್ದಿ.