Chikkaballapur : ಚಿಕ್ಕಬಳ್ಳಾಪುರ ನಗರದಲ್ಲಿ ಭಾನುವಾರ ಪರಿಸರ ಸಂರಕ್ಷಣೆ (Environmental protection) ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಸಲುವಾಗಿ ಹಾರ್ಟ್‌ಫುಲ್‌ನೆಸ್ ಸಂಸ್ಥೆಯಿಂದ ಗ್ರೀನ್ ಕನ್ಹಾ ಜಾಗತಿಕ ಓಟದ ಕಾರ್ಯಕ್ರಮದ ಅಂಗವಾಗಿ ನಗರದ ಪ್ರಮುಖ ರಸ್ತೆಗಳಲ್ಲಿ ಜಾಥಾ (Jatha) ನಡೆಯಿತು. ಬಳಿಕ ಬಿ.ಬಿ ರಸ್ತೆಯಲ್ಲಿರುವ ಜೂನಿಯರ್ ಕಾಲೇಜು ಆವರಣದಲ್ಲಿ ಸಸಿ ನೆಟ್ಟು, ಪರಿಸರ ಸಂರಕ್ಷಣೆ ಕುರಿತು ಜನರಲ್ಲಿ ಜಾಗೃತಿ ಮೂಡಿಸಲಾಯಿತು.
ಜಾಥಾದಲ್ಲಿ ಮಕ್ಕಳ ತಜ್ಞ ಡಾ.ಪ್ರಕಾಶ್, ಡಾ.ಲಲಿತಾವಿಶ್ವನಾಥ್, ಬಿ.ವಿ.ಮಂಜುಳಾ, ಹಾರ್ಟ್‌ಫುಲ್‌ನೆಸ್ ಸಂಸ್ಥೆಯ ಶಿಬಿರಾರ್ಥಿಗಳು, ಕೆವಿಟಿ ಪಾಲಿಟೆಕ್ನಿಕ್ ಸಂಸ್ಥೆಯ ವಿದ್ಯಾರ್ಥಿಗಳು, ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳು, ಜೂನಿಯರ್ ಕಾಲೇಜಿನ ವಿದ್ಯಾರ್ಥಿಗಳು, ಉಪನ್ಯಾಸಕರು ಪಾಲ್ಗೊಂಡಿದ್ದರು.
For Daily Updates WhatsApp ‘HI’ to 7406303366
Follow Chikkaballapur District News
Facebook: https://www.facebook.com/hicbpur
Twitter: https://twitter.com/hicbpur
The post ಪರಿಸರ ಸಂರಕ್ಷಣೆಗೆ ಜಾಗೃತಿ ಓಟ appeared first on Chikkaballapur.