Karachi: ಪಾಕಿಸ್ತಾನದ (Pakistan) ಕರಾಚಿಯ ಜಿನ್ನಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ (Jinnah International Airport, Karachi) ಬಳಿ ತಡರಾತ್ರಿ ಭಾರೀ ಸ್ಫೋಟ ಸಂಭವಿಸಿದೆ. BBC ವರದಿಯ ಪ್ರಕಾರ, ಸ್ಫೋಟದಲ್ಲಿ ಇಬ್ಬರು ಚೀನಾದ ನಾಗರಿಕರು ಸಾವನ್ನಪ್ಪಿದ್ದಾರೆ.
ಸಿಂಧ್ ಪ್ರಾಂತ್ಯದಲ್ಲಿ ಪವರ್ ಪ್ರಾಜೆಕ್ಟ್ನಲ್ಲಿ ಕೆಲಸ ಮಾಡುತ್ತಿದ್ದ ಚೀನಾದ ಇಂಜಿನಿಯರ್ಗಳ (Chinese engineers) ಬೆಂಗಾವಲು ವಾಹನವನ್ನು ಗುರಿಯಾಗಿಸಿಕೊಂಡು ಸ್ಫೋಟ ನಡೆಸಲಾಗಿದೆ ಎಂದು ರಾಯಭಾರ ಕಚೇರಿ ತಿಳಿಸಿದೆ. ಪ್ರತ್ಯೇಕತಾವಾದಿ ಬಲೂಚಿಸ್ತಾನ್ ರಾಷ್ಟ್ರೀಯ ಸೇನೆ ದಾಳಿಯ ಹೊಣೆ ಹೊತ್ತುಕೊಂಡಿದೆ.
ಇದು ತೈಲ ಟ್ಯಾಂಕರ್ ಸ್ಫೋಟದಂತೆ ತೋರುತ್ತಿದೆ ಎಂದು ಡೆಪ್ಯುಟಿ ಇನ್ಸ್ಪೆಕ್ಟರ್ ಜನರಲ್ ಈಸ್ಟ್ ಅಜ್ಫರ್ ಮಹೇಸರ್ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಸ್ಫೋಟದ ಸ್ವರೂಪ ಮತ್ತು ಕಾರಣಗಳನ್ನು ತಿಳಿದುಕೊಳ್ಳಲು ಸಮಯ ಬೇಕಾಗುತ್ತದೆ. ಗಾಯಗೊಂಡವರಲ್ಲಿ ಪೊಲೀಸ್ ಅಧಿಕಾರಿಗಳು ಸೇರಿದ್ದಾರೆ ಎಂದು ಅವರು ಹೇಳಿದರು.
ತಡರಾತ್ರಿ ವಿಮಾನ ನಿಲ್ದಾಣದ ಬಳಿ ಇದ್ದಕ್ಕಿದ್ದಂತೆ ದೊಡ್ಡ ಸ್ಫೋಟದ ಸದ್ದು ಕೇಳಿಸಿತು. ವಿಮಾನ ನಿಲ್ದಾಣದ ಸಮೀಪದಲ್ಲಿ ಹೊಗೆ ಕಾಣಿಸಿಕೊಂಡಿತ್ತು. ವಿಮಾನ ನಿಲ್ದಾಣದ ಹೊರಗೆ ಟ್ಯಾಂಕರ್ ಸ್ಫೋಟಗೊಂಡಿದೆ. ಹಲವಾರು ಪಾಕಿಸ್ತಾನಿ ಉದ್ಯೋಗಿಗಳು ಸಾವನ್ನಪ್ಪಿದ್ದಾರೆ ಎಂದು ಚೀನಾ ರಾಯಭಾರ ಕಚೇರಿ ತಿಳಿಸಿದೆ. ಒಟ್ಟು ಸಾವಿನ ಸಂಖ್ಯೆ ಸ್ಪಷ್ಟವಾಗಿಲ್ಲ.