Mangaluru: ಸೈಬರ್ ವಂಚಕರು (Cyber Crime) ಮಂಗಳೂರು ಪೊಲೀಸ್ ಕಮಿಷನರ್ (Mangalore Police Commissioner) ಹೆಸರಿನಲ್ಲಿ ನಕಲಿ ಫೇಸ್ಬುಕ್ (Facebook) ಖಾತೆ ತೆರೆದಿದ್ದಾರೆ.
ಸೈಬರ್ ವಂಚಕರು ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಅವರ ಹೆಸರಿನಲ್ಲಿ ಫೇಸ್ಬುಕ್ನಲ್ಲಿ ನಕಲಿ ಖಾತೆ ತೆರೆದು, ಫ್ರೆಂಡ್ ರಿಕ್ವೆಸ್ಟ್ ಕಳುಹಿಸುತ್ತಿದ್ದರು. ಬಳಿಕ, ಮೆಸೆಂಜರ್ ಮುಖಾಂತ ಸಂದೇಶ ಕಳುಹಿಸಿ ಹಣ ನೀಡುವಂತೆ ಬೇಡಿಕೆ ಇಡುತ್ತಿದ್ದರು.
ಈ ವಿಚಾರ ತಿಳಿದ ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಅವರು ವಂಚಕರ ವಿರುದ್ಧ ಮಂಗಳೂರು ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಅಲ್ಲದೇ “ತಮ್ಮ ಹೆಸರಲ್ಲಿ ಬರುವ ಸಂದೇಶಗಳಿಗೆ ಪ್ರತಿಕ್ರಿಯೆ ನೀಡಬೇಡಿ” ಎಂದು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.