Home Karnataka Election Commission ಮೇಲೆ ಸುಳ್ಳು ಆರೋಪ – Kumaraswamy ಕಿಡಿ

Election Commission ಮೇಲೆ ಸುಳ್ಳು ಆರೋಪ – Kumaraswamy ಕಿಡಿ

103
Kumaraswamy

Bengaluru: 2024ರ ಲೋಕಸಭೆ ಚುನಾವಣೆಯಲ್ಲಿ ಮತಗಳ್ಳತನ ನಡೆದಿದೆ, ನಮ್ಮ ಬಳಿ ಸಾಕ್ಷ್ಯಗಳಿವೆ ಎಂದು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಆರೋಪಿಸಿದರು. ಬಿಜೆಪಿ ಮತ್ತು ಚುನಾವಣಾ ಆಯೋಗ (Election Commission) ಕೈಜೋಡಿಸಿದ್ದಾರೆ ಎಂದೂ ಅವರು ಹೇಳಿದರು.


ಇದಕ್ಕೆ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, “ಚುನಾವಣೆ ಆಯೋಗದ ಮೇಲೆ ಸುಳ್ಳಿನ ಸುರಿಮಳೆ ಜನತಂತ್ರಕ್ಕೆ ನೇಣು ಬಿಗಿಯುವ ದುಷ್ಟ ಹುನ್ನಾರ” ಎಂದು ಕಿಡಿಕಾರಿದರು.

ಟ್ವೀಟ್ ಮೂಲಕ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ಸಾಂವಿಧಾನಿಕ ಸಂಸ್ಥೆಗಳ ವಿರುದ್ಧ ಅಸತ್ಯ ಆರೋಪ ಮಾಡುವುದು ಅಪಾಯಕಾರಿ ಪಿತೂರಿ ಎಂದು ಆರೋಪಿಸಿದರು.
ಮತಗಳ್ಳತನ ತಡೆಯಲು ಮತದಾರರ ಗುರುತಿನ ಚೀಟಿಗೆ ಆಧಾರ್ ಲಿಂಕ್ ಮಾಡುವುದು ಮಾತ್ರ ಪರಿಹಾರ ಎಂದು ಅವರು ಒತ್ತಾಯಿಸಿದರು.

ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ರಾಹುಲ್ ಗಾಂಧಿಗೆ ಸ್ವಾಗತ ಹೇಳಿ ವರಮಹಾಲಕ್ಷ್ಮಿ ಹಬ್ಬದ ಶುಭಾಶಯಗಳನ್ನು ತಿಳಿಸಿದರು.
ಅವರು, ಕಾಂಗ್ರೆಸ್ ನೇತೃತ್ವದ ಸರ್ಕಾರ ಕಳೆದ 3 ವರ್ಷಗಳಲ್ಲಿ 3 ಲಕ್ಷ ಕೋಟಿ ರೂ. ಸಾಲ ಮಾಡಿದೆ, ರಾಜ್ಯದ GSDPಯಲ್ಲಿ ಸಾಲದ ಪ್ರಮಾಣ 24.91% ಆಗಿದೆ ಎಂದು ಟೀಕಿಸಿದರು.
ಗ್ಯಾರಂಟಿ ಯೋಜನೆಗೆ ವರ್ಷಕ್ಕೆ 55 ಸಾವಿರ ಕೋಟಿ ರೂ. ಬೇಕು, ಆದರೆ ಸರ್ಕಾರ ಈಗಾಗಲೇ ವರ್ಷಕ್ಕೆ 1 ಲಕ್ಷ ಕೋಟಿ ರೂ. ಸಾಲ ಮಾಡುತ್ತಿದೆ ಎಂದು ಆರೋಪಿಸಿದರು.

ಬೃಹತ್ ಪ್ರತಿಭಟನೆಯ ಬಗ್ಗೆ ಬಿಜೆಪಿ ಶಾಸಕ ಅಶ್ವತ್ಥ್ ನಾರಾಯಣ ಮಾತನಾಡಿ, ಇದು ಕೇವಲ ಶಕ್ತಿ ಪ್ರದರ್ಶನಕ್ಕಾಗಿ ಮಾತ್ರ ಎಂದು ಹೇಳಿದರು. ಫ್ರೀಡಂ ಪಾರ್ಕ್‌ನಲ್ಲಿ 10 ಸಾವಿರ ಜನ ಮಾತ್ರ ಸೇರುವಂತೆ ನಿಯಮವಿದ್ದರೂ, ಲಕ್ಷಕ್ಕೂ ಹೆಚ್ಚು ಜನ ಬರಲಿದ್ದಾರೆ ಎಂದು ಹೇಳಿದರು.
“ಈ ಪ್ರತಿಭಟನೆಗೆ ಅರ್ಥವಿಲ್ಲ” ಎಂದು ಟೀಕಿಸಿದರು.

For Daily Updates WhatsApp ‘HI’ to 7406303366

NO COMMENTS

LEAVE A REPLY

Please enter your comment!
Please enter your name here

You cannot copy content of this page