Home Entertainment Vettaiyaan ಸಿನಿಮಾದ ವಿರುದ್ಧ complaint ದಾಖಲು

Vettaiyaan ಸಿನಿಮಾದ ವಿರುದ್ಧ complaint ದಾಖಲು

Vettaiyaan Movie Court Case

ರಜನೀಕಾಂತ್, ಅಮಿತಾಬ್ ಬಚ್ಚನ್, (Rajinikanth, Amitabh Bachchan, Fahadh Faasil) ಫಹಾದ್ ಫಾಸಿಲ್ ಇನ್ನಿತರರು ನಟಿಸಿರುವ ‘ವೆಟ್ಟೈಯಾನ್’ (Vettaiyaan) ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ, ಆದರೆ ಇದೀಗ ಸಿನಿಮಾದ ವಿರುದ್ಧ ನ್ಯಾಯಾಲಯದಲ್ಲಿ ಮೊಕದ್ದಮೆ ದಾಖಲಿಸಲಾಗಿದೆ.

ಸಿನಿಮಾದ ಟ್ರೈಲರ್ (Trailer) ಇತ್ತೀಚೆಗಷ್ಟೆ ಬಿಡುಗಡೆ ಆಗಿದ್ದು, ಟ್ರೈಲರ್ನಲ್ಲಿ ಕೇಳಿ ಬರುವ ಕೆಲ ಸಂಭಾಷಣೆಗಳ ವಿರುದ್ಧ ವಕೀಲರೊಬ್ಬರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲು ಮಾಡಿದ್ದು, ಸಿನಿಮಾದಲ್ಲಿ ಬಳಸಲಾಗಿರುವ ಕೆಲವು ಸಂಭಾಷಣೆಗಳ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಸಿನಿಮಾದಲ್ಲಿ ಅಕ್ರಮ ಚಟುವಟಿಕೆಯಾದ ಎನ್ಕೌಂಟರ್ಗೆ ಒತ್ತು ನೀಡುವ, ಎನ್ಕೌಂಟರ್ ಅನ್ನು ಸರಿಯೆಂದು ವಾದಿಸುವ ಸಂಭಾಷಣೆಗಳಿವೆ. ಇದು ಸಮಾಜಕ್ಕೆ ಮಾರಕವಾಗಿದ್ದು, ಈ ಸಿನಿಮಾ ಬಿಡುಗಡೆ ಆದರೆ ಜನರ ಮನಸ್ಸಿನಲ್ಲಿ ಎನ್ಕೌಂಟರ್ಗಳು ಸರಿಯೆಂಬ ಭಾವನೆ ಜನರ ಮನಸಿನಲ್ಲಿ ಮೂಡಲಿದೆ. ಹಾಗಾಗಿ ಈ ಸಿನಿಮಾದಲ್ಲಿರುವ ಎನ್ಕೌಂಟರ್ ಕುರಿತಾದ ಸಂಭಾಷಣೆಗಳನ್ನು ಮ್ಯೂಟ್ ಮಾಡುವಂತೆ ನಿರ್ಮಾಣಸಂಸ್ಥೆಗೆ ಸೂಚಿಸಬೇಕು, ಇಲ್ಲವಾದರೆ ಸಿನಿಮಾದ ಬಿಡುಗಡೆಗೆ ತಾತ್ಕಾಲಿಕ ತಡೆ ನೀಡಬೇಕೆಂದು ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿ ಕೋರಲಾಗಿದೆ.

ಅರ್ಜಿಯ ವಿಚಾರಣೆ ನಡೆಸಿದ ದ್ವಿಸದಸ್ಯ ಪೀಠವು, ಸಿಬಿಎಫ್ಸಿ ಹಾಗೂ ಸಿನಿಮಾ ನಿರ್ಮಾಣ ಮಾಡಿರುವ ಲೈಕಾ ಪ್ರೊಡಕ್ಷನ್ ಹೌಸ್ಗೆ ನೊಟೀಸ್ ಜಾರಿ ಮಾಡಿದೆ. ಆದರೆ ಸಿನಿಮಾದ ಬಿಡುಗಡೆ ಮೇಲೆ ತಾತ್ಕಾಲಿಕ ತಡೆ ನೀಡಲು ಪೀಠವು ನಿರಾಕರಿಸಿದೆ. ಸಿಬಿಎಫ್ಸಿ ಹಾಗೂ ಲೈಕಾ ಪ್ರೊಡಕ್ಷನ್ ಹೌಸ್ನ ಪ್ರತಿಕ್ರಿಯೆ ಬಂದ ಬಳಿಕ ಈ ಅರ್ಜಿಯ ಮುಂದಿನ ವಿಚಾರಣೆ ನಡೆಯಲಿದೆ.

For Daily Updates WhatsApp ‘HI’ to 7406303366

NO COMMENTS

LEAVE A REPLY

Please enter your comment!
Please enter your name here

You cannot copy content of this page

Exit mobile version