Kalaburagi: ಹಿಂದೂ ಯುವಕರು ಮುಸ್ಲಿಂ ಯುವತಿಯರನ್ನು ಪ್ರೀತಿಸಿ ಮದುವೆಯಾದರೆ ತಲಾ ₹5 ಲಕ್ಷ ರೂಪಾಯಿ ಬಹುಮಾನ ನೀಡುತ್ತೇನೆ ಎಂದು ಹೇಳಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಇದೀಗ ಚರ್ಚೆಗೆ ಗ್ರಾಸವಾಗಿದ್ದಾರೆ. ಈ ಹೇಳಿಕೆಯ ಹಿನ್ನೆಲೆಯಲ್ಲಿ ಅವರ ವಿರುದ್ಧ ಕಲಬುರಗಿಯ ರೋಜಾ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.
ಖಿದ್ಮತ್-ಎ-ಮಿಲ್ಲತ್ ಕಮಿಟಿ ಅಧ್ಯಕ್ಷ ಜುನೈದ್ ಖುರೇಶಿ ದೂರು ನೀಡಿದ್ದು, IPC ಕಲಂ 196, 299, 353(1)(c), 353(2) ಅಡಿ ಪ್ರಕರಣ ದಾಖಲಿಸಲಾಗಿದೆ. ದೂರುದಲ್ಲಿ, ಯತ್ನಾಳ್ ಹಲವು ವರ್ಷಗಳಿಂದ ಒಂದು ನಿರ್ದಿಷ್ಟ ಧಾರ್ಮಿಕ ಸಮುದಾಯವನ್ನು ಗುರಿಯಾಗಿಸಿ ದ್ವೇಷ ಭಾಷಣ ಮಾಡುತ್ತಿರುವುದು, ಸಮಾಜದಲ್ಲಿ ವಿಭಜನೆ ಉಂಟುಮಾಡುವ ರೀತಿಯ ಹೇಳಿಕೆಗಳನ್ನು ನೀಡುತ್ತಿರುವುದು ಉಲ್ಲೇಖಿಸಲಾಗಿದೆ.
ಆಗಸ್ಟ್ 11 ರಂದು ಕೊಪ್ಪಳದಲ್ಲಿ ನಡೆದ ಕಾರ್ಯಕ್ರಮದಲ್ಲಿ, ಹಿಂದೂ ಹುಡುಗರು ಮುಸ್ಲಿಂ ಹುಡುಗಿಯರನ್ನು ಮದುವೆಯಾದರೆ ₹5 ಲಕ್ಷ ರೂಪಾಯಿ ನಗದು ಪ್ರೋತ್ಸಾಹ ನೀಡುವುದಾಗಿ ಯತ್ನಾಳ್ ಘೋಷಿಸಿದ್ದರು. ದೂರುದಾರರ ಪ್ರಕಾರ, ಈ ಹೇಳಿಕೆ ಒಂದು ಸಮುದಾಯವನ್ನು ಗುರಿಯಾಗಿಸಿ, ಮತ್ತೊಂದು ಸಮುದಾಯವನ್ನು ಪ್ರಚೋದಿಸುವ ಉದ್ದೇಶ ಹೊಂದಿದೆ. ಇದರಿಂದ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆ ಇದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.