Home Entertainment ‘Kantara 2” ಚಿತ್ರದ ಶೂಟಿಂಗ್ ವೇಳೆ ಅರಣ್ಯಕ್ಕೆ ಹಾನಿ

‘Kantara 2” ಚಿತ್ರದ ಶೂಟಿಂಗ್ ವೇಳೆ ಅರಣ್ಯಕ್ಕೆ ಹಾನಿ

Kantara 2

‘ಕಾಂತಾರ’ (Kantara) ಚಿತ್ರದ ಯಶಸ್ಸಿನ ನಂತರ ರಿಷಬ್ ಶೆಟ್ಟಿ ಅವರ ಹೊಸ ಸಿನಿಮಾದ ಶೂಟಿಂಗ್ ಕುಂದಾಪುರದಲ್ಲಿ ನಡೆಯುತ್ತಿದೆ. ಈ ಚಿತ್ರದ ಶೂಟಿಂಗ್ ಮೊದಲು ಹೆರೂರು ಗ್ರಾಮದ ಅರಣ್ಯ ಪ್ರದೇಶದಲ್ಲಿ ನಡೆಯುತ್ತಿದೆ, ಆದರೆ ಅರಣ್ಯ ಜಾಗದಲ್ಲಿ ಬೆಂಕಿ ಹಚ್ಚಿ ಪರಿಸರಕ್ಕೆ ಹಾನಿ ಮಾಡುವ ಆರೋಪಗಳು ಬಂದಿವೆ.

ಗ್ರಾಮಸ್ಥರು ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ, ಚಿತ್ರತಂಡದಿಂದ ಯಾವ ಪರವಾನಗಿಗಳು ಪಡೆದಿವೆ ಎಂದು ಮಾಹಿತಿ ನೀಡುವಂತೆ ಆಗ್ರಹಿಸಿದ್ದಾರೆ. ಅಲ್ಲದೆ, ಕಾಡಿನಲ್ಲಿ ಬೆಂಕಿ ಹಚ್ಚಿದ ಪರಿಣಾಮ, ಕಾಡುಪ್ರಾಣಿಗಳು ಜನವಸತಿ ಪ್ರದೇಶಕ್ಕೆ ಪ್ರವೇಶಿಸುತ್ತಿವೆ.

“ಶೂಟಿಂಗ್ ಅನ್ನು ತಕ್ಷಣ ನಿಲ್ಲಿಸಿ, ಪರಿಸರವನ್ನು ರಕ್ಷಿಸಬೇಕು. ಇಲ್ಲದಿದ್ದರೆ ಡಿಸಿ ಕಚೇರಿ ಮುಂದೆ ಧರಣಿ ನಡೆಸುತ್ತೇವೆ” ಎಂದು ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ.

For Daily Updates WhatsApp ‘HI’ to 7406303366

NO COMMENTS

LEAVE A REPLY

Please enter your comment!
Please enter your name here

You cannot copy content of this page

Exit mobile version