ದೆಹಲಿಯ ಮಾಜಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್, (Aam Aadmi Party chief Arvind Kejriwal) 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಉಚಿತ ವೈದ್ಯಕೀಯ ಸೇವೆ (Free healthcare) ಒದಗಿಸಲು ಸಂಜೀವಿನಿ ಯೋಜನೆ ಎಂಬ ಹೊಸ ಯೋಜನೆಯನ್ನು ಘೋಷಿಸಿದ್ದಾರೆ.
60 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನವರಿಗೆ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಉಚಿತ ಆರೋಗ್ಯ ಸೇವೆ ದೊರೆಯುತ್ತದೆ. ಎರಡು ದಿನಗಳ ಒಳಗೆ ಯೋಜನೆಗೆ ನೋಂದಣಿ ಪ್ರಾರಂಭವಾಗುತ್ತದೆ. ಆಮ್ ಆದ್ಮಿ ಕಾರ್ಯಕರ್ತರು ಮನೆಗೆ ಬಂದು ಕಾರ್ಡ್ ನೀಡುತ್ತಾರೆ, ಇದು ಉಚಿತ ಚಿಕಿತ್ಸೆಗಾಗಿ ಅನಿವಾರ್ಯವಾಗಿದೆ. ಯಾವುದೇ ಚಿಕಿತ್ಸೆಗೆ ವೆಚ್ಚದ ಮಿತಿಯನ್ನು ನಿಗದಿಪಡಿಸಲಾಗಿಲ್ಲ.
“ನಿಮ್ಮ ಆರೋಗ್ಯವನ್ನು ನೋಡಿಕೊಳ್ಳುವುದು ನಮ್ಮ ಕರ್ತವ್ಯ. ನೀವು ಈ ದೇಶಕ್ಕಾಗಿ ದುಡಿಯಿದ್ದೀರಿ, ಈಗ ನಮ್ಮ ಪಾಳಿಯಲ್ಲಿ ನೀವು ಎಂದರು.” ಕೇಜ್ರಿವಾಲ್. ಈ ಯೋಜನೆಯನ್ನು ಗ್ಯಾರಂಟಿ ಯೋಜನೆ ಎಂದು ಘೋಷಿಸಿದ್ದು, ಆಪ್ ಅಧಿಕಾರಕ್ಕೆ ಬಂದ ತಕ್ಷಣ ಯೋಜನೆ ಜಾರಿಗೆ ಬರುತ್ತದೆ.
2024ರ ಫೆಬ್ರವರಿಯಲ್ಲಿ ನಡೆಯಲಿರುವ ಚುನಾವಣೆಗೆ ಆಮ್ ಆದ್ಮಿ ಪಕ್ಷ ಭರ್ಜರಿ ತಯಾರಿ ನಡೆಸಿದ್ದು, ಎಲ್ಲಾ 70 ಸ್ಥಾನಗಳಿಗೆ ತಮ್ಮ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದೆ. ಕೇಜ್ರಿವಾಲ್ ನವದೆಹಲಿ ಕ್ಷೇತ್ರದಿಂದ ಸ್ಪರ್ಧಿಸಲಿದ್ದು, ಕಲ್ಕಾಜಿ ಕ್ಷೇತ್ರದಲ್ಲಿ ಅತಿಶಿ ಸ್ಪರ್ಧಿಸುತ್ತಾರೆ.
2020ರ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಆಪ್ 70ರಲ್ಲಿ 62 ಸ್ಥಾನ ಗೆದ್ದು ಪ್ರಾಬಲ್ಯವನ್ನು ಸಾಧಿಸಿತ್ತು. ಈಗ ಮತ್ತೆ ಆಮ್ ಆದ್ಮಿ ಪಕ್ಷ ಜನರಿಗೆ ಅನುಕೂಲಕರ ಯೋಜನೆಗಳೊಂದಿಗೆ ಚುನಾವಣಾ ಪ್ರಚಾರ ಬಿರುಸು ಮಾಡಿದೆ.