Delhi: ಎಥೆನಾಲ್ ಮಿಶ್ರಿತ ಇಂಧನ ಬಿಡುಗಡೆ ಕುರಿತಂತೆ ಆನ್‌ಲೈನ್‌ನಲ್ಲಿ ನಡೆಯುತ್ತಿರುವ ಟೀಕೆಯ ಬಗ್ಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ (Gadkari) ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತಮ್ಮ ವಿರುದ್ಧ ರಾಜಕೀಯ ಉದ್ದೇಶದಿಂದ “ಪೇಯ್ಡ್ ಅಭಿಯಾನ” ನಡೆಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.
ಎಥೆನಾಲ್ ಮಿಶ್ರಿತ ಇಂಧನದ ಸುರಕ್ಷತೆ, ಭಾರತೀಯ ಆಟೋಮೊಬೈಲ್ ತಯಾರಕರ ಸಂಘದ 65ನೇ ವಾರ್ಷಿಕ ಸಮಾವೇಶದಲ್ಲಿ ಮಾತನಾಡಿದ ಗಡ್ಕರಿ, E20 ಪೆಟ್ರೋಲ್ ಸುರಕ್ಷಿತವಾಗಿದ್ದು, ನಿಯಂತ್ರಕರು ಹಾಗೂ ವಾಹನ ತಯಾರಕರು ಇದನ್ನು ಬೆಂಬಲಿಸುತ್ತಿದ್ದಾರೆ ಎಂದರು.
E20 ಇಂಧನ ಬಿಡುಗಡೆ ನಿಲ್ಲಿಸಬೇಕೆಂದು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಇದರಿಂದ ಎಥೆನಾಲ್ ಮಿಶ್ರಣದ ಯೋಜನೆಗೆ ಬಲ ದೊರಕಿದೆ.
ಎಥೆನಾಲ್ ಮಿಶ್ರಣವು ತೈಲ ಆಮದುಗಳನ್ನು ಕಡಿಮೆ ಮಾಡುತ್ತದೆ ಮತ್ತು ರೈತರಿಗೆ ಹೆಚ್ಚುವರಿ ಆದಾಯದ ಅವಕಾಶಗಳನ್ನು ಸೃಷ್ಟಿಸುತ್ತದೆ ಎಂದು ಗಡ್ಕರಿ ಹೇಳಿದರು. ಮೆಕ್ಕೆಜೋಳದಿಂದ ಎಥೆನಾಲ್ ತಯಾರಿಕೆ ಪ್ರಾರಂಭವಾದ ಕಾರಣ ಕೃಷಿ ಉತ್ಪಾದನೆ ಮೂರು ಪಟ್ಟು ಹೆಚ್ಚಾಗಿದೆ ಎಂದು ಅವರು ಉದಾಹರಿಸಿದರು.